ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಆಕ್ಷರಾಭ್ಯಾಸ

ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿಜಿಎಸ್ ಬಾಲಜಗತ್ ಶಾಲೆಯಲ್ಲಿ ಸೋಮವಾರ ಶಾಲೆಗೆ ನೂತನವಾಗಿ ದಾಖಲಾಗಿರುವ ಮಕ್ಕಳಿಗೆ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅಕ್ಷತೆ ಹಾಕುವ ಮೂಲಕ ಅಕ್ಷರಾಭ್ಯಾಸಕ್ಕೆ ಚಾಲನೆ ನೀಡಿದರು. ಕೆ.ಆಶಾ, ಅಭಿ ಇತರರು ಇದ್ದರು.

Published on

ಕೆ.ಆರ್.ಸಾಗರ: ಸಮೀಪದ ಹುಲಿಕೆರೆ ಗ್ರಾಮದ ಕೆ.ಆರ್.ಸಾಗರ ರಸ್ತೆಯಲ್ಲಿರುವ ಬಿ.ಜಿ.ಎಸ್ ಬಾಲಜಗತ್ ಶಾಲೆಯಲ್ಲಿ ಸೋಮವಾರ ಶಾಲೆಗೆ ನೂತನವಾಗಿ ದಾಖಲಾಗಿರುವ ಪುಟ್ಟ ಮಕ್ಕಳಿಗೆ ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಕಾರ್ಯದರ್ಶಿ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಅಕ್ಷತೆ ಹಾಕುವ ಮೂಲಕ ಅಕ್ಷರಾಭ್ಯಾಸ ನಡೆಸಿದರು.

ಸ್ವಾಮೀಜಿ ಮಾರ್ಗದರ್ಶನದಲ್ಲಿ ಸರಸ್ವತಿ ಹಾಗೂ ಲೇಖನ ಸಾಮಗ್ರಿಗಳಿಗೆ ಪೂಜೆ ಸಲ್ಲಿಸಿದ ಪಾಲಕರು ನಂತರ ತಮ್ಮ ಪುಟ್ಟ ಮಕ್ಕಳ ಜತೆ ಕುಳಿತು ಪೂಜೆ ಸಲ್ಲಿಸಿದ ತಟ್ಟೆಯಲ್ಲಿದ್ದ ಅಕ್ಕಿಯಲ್ಲಿ ಓಂಕಾರ ಬರೆಯುವ ಮೂಲಕ ಅಕ್ಷರಾಭ್ಯಾಸ ನಡೆಸಿದರು.

ಈ ವೇಳೆ ಶ್ರೀ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ, ನಮ್ಮ ಸಂಸ್ಕೃತಿ ಕಾಪಾಡಿಕೊಳ್ಳುವುದು ಅತ್ಯಗತ್ಯವಾಗಿದೆ. ಪಾಲಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಿದ ಮಾತ್ರಕ್ಕೆ ಜವಾಬ್ದಾರಿ ಮುಗಿಯುವುದಿಲ್ಲ. ತಂದೆ-ತಾಯಿ ಮಗುವಿನ ಮೊದಲ ಗುರುವಾಗಿದ್ದು, ಮಕ್ಕಳ ಚಟುವಟಿಕೆ ಬಗ್ಗೆ ಪ್ರತಿದಿನ ಗಮನ ಹರಿಸಬೇಕು. ಶೈಕ್ಷಣಿಕ ಚಟುವಟಿಕೆಗಳ ಜತೆಗೆ ಮಕ್ಕಳು ಸಾಂಸ್ಕೃತಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಪಾಲಕರು ಪ್ರೋತ್ಸಾಹ ನೀಡಬೇಕು ಎಂದು ಸಲಹೆ ನೀಡಿದರು.

ನಂತರ ಪ್ರಸಾದ ವಿನಿಯೋಗ ಮಾಡಲಾಯಿತು. ಈ ಸಂದರ್ಭದಲ್ಲಿ ಶಾಲೆ ಮುಖ್ಯಶಿಕ್ಷಕಿ ಕೆ.ಆಶಾ, ಕಚೇರಿ ಸಹಾಯಕ ಅಭಿ, ಶಾಲೆ ಶಿಕ್ಷಕರು, ಪಾಲಕರು ಹಾಗೂ ವಿದ್ಯಾರ್ಥಿಗಳಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net