ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ

bhr akshara
ಬಾಳೆಹೊನ್ನೂರಿನ ದುರ್ಗಾದೇವಿ ನವರಾತ್ರಿ ಮಹೋತ್ಸವದಲ್ಲಿ ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.
Published on

ಬಾಳೆಹೊನ್ನೂರು: ಮಾರ್ಕಂಡೇಶ್ವರ ದೇವಸ್ಥಾನದ ಆವರಣದಲ್ಲಿ ನಡೆಯುತ್ತಿರುವ ಹದಿನೈದನೇ ವರ್ಷದ ದುರ್ಗಾದೇವಿ ನವರಾತ್ರಿ ಮಹೋತ್ಸವದಲ್ಲಿ ಮಂಗಳವಾರ ದುರ್ಗಾ ಸನ್ನಿಧಿಯಲ್ಲಿ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು.

ನವರಾತ್ರಿ ಆರನೇ ದಿನ ಆಶ್ವಯುಜ ಶುದ್ಧ ಪಂಚಮಿಯ ಮೂಲಾ ನಕ್ಷತ್ರದ ದಿನ ದುರ್ಗೆಯು ವಿಷ್ಣುರೂಪಿಣಿಯಾಗಿ, ಇಂದ್ರಾಣಿಯಾಗಿ ದೇವತೆಗಳಿಗೆ ದರ್ಶನ ನೀಡಿದ ದಿನವೆಂದು ಪುರಾಣದಲ್ಲಿ ಉಲ್ಲೇಖವಿದ್ದು, ಈ ದಿನ ಸರಸ್ವತಿ ಪೂಜಾ ದಿನವಾಗಿರುವುದದರಿಂದ ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಿದಲ್ಲಿ ಮಕ್ಕಳು ವಿದ್ಯಾಸಂಪನ್ನರಾಗಿ ಉತ್ತಮ ವ್ಯಕ್ತಿಗಳಾಗುತ್ತಾರೆ ಎಂಬ ನಂಬಿಕೆ ಇದೆ. ಈ ಹಿನ್ನೆಲೆಯಲ್ಲಿ ಮಂಗಳವಾರ ಐದು ಪುಟ್ಟ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡಿಸಲಾಯಿತು. ಅಕ್ಷರಾಭ್ಯಾಸದ ಪ್ರಯುಕ್ತ ದೇವಿಯನ್ನು ಶಾರದಾ ಮಾತೆಯ ರೂಪದಲ್ಲಿ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಮಕರವಾಹಿನಿ ವಾರುಣಿ ರೂಪಿಣಿ ಪೂಜಾ ಪಾರಾಯಣ ನಡೆಸಲಾಯಿತು.
ಸಮಿತಿ ಕಾರ್ಯಾಧ್ಯಕ್ಷ ಬಿ.ಚನ್ನಕೇಶವ ಬರಗಲ್, ಖಜಾಂಚಿ ಭಾಸ್ಕರ್ ವೆನಿಲ್ಲಾ, ಪ್ರಧಾನ ಕಾರ್ಯದರ್ಶಿ ಆರ್.ಡಿ.ಮಹೇಂದ್ರ, ಜಂಟಿ ಕಾರ್ಯದರ್ಶಿ ಪ್ರಭಾಕರ್ ಪ್ರಣಸ್ವಿ, ಎಚ್.ಡಿ.ಸತೀಶ್, ರೆನ್ನಿ ದೇವಯ್ಯ, ಚೈತನ್ಯ ವೆಂಕಿ, ಡಿ.ಎನ್.ಸುಧಾಕರ್, ಶ್ರೀಕಾಂತ್, ಬಿ.ಕೆ.ನಾಗರಾಜ್, ಎಚ್.ಎಚ್.ಕೃಷ್ಣಮೂರ್ತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net