

ಬೆಂಗಳೂರು: ಬಿಎಂಶ್ರೀ ಪ್ರತಿಷ್ಠಾನ ಕೊಡಮಾಡುವ 2023ನೇ ಸಾಲಿನ ‘ಸಾವಿತ್ರಮ್ಮ-ಪ್ರೊ. ಎಂ.ವಿ.ಸೀತಾರಾಮಯ್ಯ ಸಾಹಿತ್ಯ ಪುರಸ್ಕಾರ’ಕ್ಕೆ ಹುಬ್ಬಳ್ಳಿಯ ಮಹಿಳಾ ಸಾಹಿತಿ ಸುನಂದಾ ಕಡಮೆ ಆಯ್ಕೆಯಾಗಿದ್ದಾರೆ.
ಪುರಸ್ಕಾರವು 30 ಸಾವಿರ ರೂ. ನಗದು, ಪ್ರಶಸ್ತಿ ಫಲಕ ಹಾಗೂ ಅಭಿನಂದನಾ ಪತ್ರ ಒಳಗೊಂಡಿರುತ್ತದೆ. ಪ್ರಶಸ್ತಿ ಪ್ರದಾನ ಸಮಾರಂಭವು ಬೆಂಗಳೂರಿನಲ್ಲಿ ಈ ತಿಂಗಳ 9ರಂದು ಪ್ರತಿಷ್ಠಾನದ ಸಭಾಂಗಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಗೌರವ ಕಾರ್ಯದರ್ಶಿ ಡಾ. ಶಾಂತರಾಜು ತಿಳಿಸಿದ್ದಾರೆ.