

ಕಡೂರು: ಕನ್ನಡ ಭಾಷೆ ಎರಡು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಅತ್ಯಂತ
ಪ್ರಾಚೀನ ಭಾಷೆಯಾಗಿದೆ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸೂರಿ ಶ್ರೀನಿವಾಸ್
ಹೇಳಿದರು.
ತಾಲೂಕಿನ ಪಟ್ಟಣಗೆರೆ ಗ್ರಾಮದಲ್ಲಿ ಕಸಬಾ ಹೋಬಳಿ ಕನ್ನಡ ಸಾಹಿತ್ಯ ಪರಿಷತ್‌ನ ಹೋಬಳಿ
ಘಟಕದ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ವಿಶ್ವದಲ್ಲಿರುವ
ಇತರೆ ಭಾಷೆಗಳನ್ನು ಗಮನಿಸಿದಾಗ ಅತ್ಯಂತ ಸುಂದರ ಹಾಗೂ ಸುಲಲಿತ ಭಾಷೆ ನಮ್ಮ
ಕನ್ನಡ ಭಾಷೆಯಾಗಿದೆ ಇದು. ಇದು ಇತರೆ ಎಲ್ಲ ಭಾಷೆಗಳಿಗೂ ರಾಜನಿದ್ದಂತೆ ಎಂದರು.
ಭುವನೇಶ್ವರಿ ಭಾವಚಿತ್ರ ಅನಾವರಣಗೊಳಿಸಿದ ಜಿಲ್ಲಾ ಕೋಶಾಧ್ಯಕ್ಷ ಬಿ. ಪ್ರಕಾಶ್
ಮಾತನಾಡಿ, ರಾಜ್ಯದಲ್ಲಿಯೇ ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ವಿನೂತನ
ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ರಾಜ್ಯದಲ್ಲೇ ಜಿಲ್ಲೆಯು ಪ್ರಥಮ ಸ್ಥಾನ
ಗಳಿಸಿಕೊಂಡಿದೆ. ಕಡೂರು ತಾಲೂಕಿನಲ್ಲಿ ಗ್ರಾಮ ಸಾಹಿತ್ಯ ಸಮ್ಮೇಳನ, ಹೋಬಳಿ ಸಾಹಿತ್ಯ
ಸಮ್ಮೇಳನ ಹಾಗೂ ತಾಲೂಕು ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಈಗಾಗಲೇ
ತಯಾರಿ ನಡೆದಿದೆ ಎಂದರು.
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಪ್ರಧಾನ ಕಾರ್ಯದರ್ಶಿಗಳಾದ ಎಸ್.ಎಸ್.ವೆಂಕಟೇಶ್
ಪ್ರತಿಜ್ಞಾವಿಧಿ ಬೋಧಿಸಿದರು. ತಾಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಮಹಿಳಾ ಘಟಕದ
ಅಧ್ಯಕ್ಷೆ ಲತಾ ರಾಜಶೇಖರ್, ಕಾರ್ಯದರ್ಶಿ ಜಿ.ಎಸ್. ಪ್ರಸನ್ನ, ಕುರುಬಗೆರೆ ತಿಮ್ಮಯ್ಯ, ಕಟ್ಟೆ
ಹೊಳೆಯಮ್ಮ ಜಾತ್ರಾ ಸಮಿತಿ ಅಧ್ಯಕ್ಷ ಎಸ್.ಬಿ.ಹನುಮಂತಪ್ಪ, ಪಟ್ಟಣಗೆರೆ ಗ್ರಾಪಂ ಅಧ್ಯಕ್ಷೆ
ಶಾಲಿನಿ ದಿನೇಶ್, ವೆಂಕಟೇಶ್, ಮಲ್ಲೇಶಪ್ಪ, ಪಿ.ಟಿ.ಹರೀಶ್, ಸಿಂಗಟಿಗೆರೆ ಸಿದ್ದಪ್ಪ
ಮತ್ತಿತರಿದ್ದರು.