ಮಹಿಳೆಯ ಸ್ವಾವಲಂಬಿ ಬದುಕಿಗೆ ನೆರವು

12myk2
Published on

ಮಾಯಕೊಂಡ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಹಾಗೂ ಹೇಮಾವತಿಯವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಪ್ರಾರಂಭಿಸಿ ಮಹಿಳೆಯರಿಗೆ ಆರ್ಥಿಕವಾಗಿ ನೆರವು ನೀಡಿ, ಸಾಮಾಜಿಕವಾಗಿ ಸ್ವಾವಲಂಬಿ ಬದುಕನ್ನು ಸಾಗಿಸುವಂತೆ ಮಾಡಿದ್ದಾರೆ ಎಂದು ಸಾಹಿತಿ ಎನ್.ಜೆ. ಶಿವಕುಮಾರ್ ಹೇಳಿದರು.

ಮಾಯಕೊಂಡ ಹೋಬಳಿಯ ಕೊಡಗನೂರು ವಲಯದ ಗಂಗನಕಟ್ಟೆ ಗ್ರಾಮದಲ್ಲಿ ಗುರುವಾರ ಜ್ಞಾನವಿಕಾಸ ಮಹಿಳಾ ಕಾರ್ಯಕ್ರಮದಡಿ ನೂತನ ಸಂಪಿಗೆ ಜ್ಞಾನವಿಕಾಸ ಕೇಂದ್ರವನ್ನು ಉದ್ಘಾಟಿಸಿ ಮಾತನಾಡಿದರು.

ಧಗ್ರಾಯೋ ತಾಲೂಕು ಯೋಜನಾಧಿಕಾರಿ ಯಶೋದಾ ಮಾತನಾಡಿ, ಜ್ಞಾನ ವಿಕಾಸ ಕಾರ್ಯಕ್ರಮದಿಂದ ಮಹಿಳೆಯರು ಆರ್ಥಿಕ, ಶೈಕ್ಷಣಿಕ, ಸಾಮಾಜಿಕ ಮತ್ತು ಕೌಟುಂಬಿಕ ಯಶಸ್ವಿನತ್ತ ಸಾಗಬೇಕು ಎನ್ನುವ ಸದುದ್ದೇಶದಿಂದ ವೀರೇಂದ್ರ ಹೆಗ್ಗಡೆ ದಂಪತಿ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದ್ದಾರೆ ಎಂದರು.

ಗ್ರಾಪಂ ಮಾಜಿ ಅಧ್ಯಕ್ಷ ಸಂಗಪ್ಪ ಮಾತನಾಡಿ, ಈ ಯೋಜನೆ ಮಹಿಳೆಯರ ಪಾಲಿಗೆ ಆಶಾಕಿರಣವಾಗಿದೆ. ಬದುಕನ್ನು ಕಟ್ಟಿಕೊಳ್ಳಲು ನೆರವಾಗಿದೆ. ಬ್ಯಾಂಕಿನಿಂದ ನೀಡುವ ಸಾಲ ಸೌಲಭ್ಯವನ್ನು ಪ್ರತಿಯೊಬ್ಬರೂ ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಂಡು, ಯೋಜನೆಯ ಸದುಪಯೋಗ ಪಡೆದುಕೊಳ್ಳಿ ಎಂದು ಹೇಳಿದರು.

ಶಿಕ್ಷಕಿ ಶ್ವೇತಾ ಮಾತನಾಡಿದರು. ನೇರ್ಲಿಗೆ ಗ್ರಾಪಂ ಅಧ್ಯಕ್ಷೆ ಶಶಿಕಲಾ, ಒಕ್ಕೂಟದ ಅಧ್ಯಕ್ಷೆ ಓಂಕಾರಮ್ಮ, ಜ್ಞಾನವಿಕಾಸ ಸಮನ್ವಯಾಧಿಕಾರಿ ಪ್ರತಿಭಾ, ಮೇಲ್ವಿಚಾರಕಿ ಚಂದ್ರಕಲಾ, ಸೇವಾ ಪ್ರತಿನಿಧಿ ಶೃತಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net