8ರಂದು ಚಾಮರಾಜ ವಿಧಾನಸಭಾ ಕ್ಷೇತ್ರದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ

mysore
Published on

ಮೈಸೂರು: ಕನ್ನಡ ಸಾಹಿತ್ಯ ಪರಿಷತ್ ಮೈಸೂರು ನಗರ ಘಟಕದ ವತಿಯಿಂದ ಚಾಮರಾಜ ವಿಧಾನಸಭಾ ಕ್ಷೇತ್ರದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಫೆ.8ರಂದು ನಗರದ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.


ಬೆಳಗ್ಗೆ 8.30ಕ್ಕೆ ಶಾಸಕ ಕೆ.ಹರೀಶ್‌ಗೌಡ ಧ್ವಜಾರೋಹಣ ಮಾಡುವರು. 9ಗಂಟೆಗೆ ಕೋಟೆ ಆಂಜನೇಯ ದೇವಸ್ಥಾನ ಮುಂಭಾಗದಿಂದ ಸಮ್ಮೇಳನಾಧ್ಯಕ್ಷರೂ ಆದ ವಿಶ್ರಾಂತ ಕುಲಪತಿ ಕೆ.ಚಿದಾನಂದಗೌಡ ಅವರನ್ನು ಮೆರವಣಿಗೆ ಮೂಲಕ ವೇದಿಕೆಗೆ ಕರೆತರಲಾಗುತ್ತದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಮಡ್ಡೀಕೆರೆ ಗೋಪಾಲ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


ಬೆಳಗ್ಗೆ 11ಕ್ಕೆ ಕಲಾಮಂದಿರದಲ್ಲಿ ಸಮ್ಮೇಳನದ ಸಭಾ ಕಾರ್ಯಕ್ರಮ ನಡೆಯಲಿದ್ದು, ನಿವೃತ್ತ ಪ್ರಾಂಶುಪಾಲ ಪ್ರೊ.ಕೃಷ್ಣೇಗೌಡ ಕಾರ್ಯಕ್ರಮ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಸಾಹಿತಿ ಪ್ರೊ.ಅರವಿಂದ ಮಾಲಗತ್ತಿ, ಮಾಜಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಇನ್ನಿತರರು ಪಾಲ್ಗೊಳ್ಳುವರು ಎಂದು ಮಾಹಿತಿ ನೀಡಿದರು.


ಕನ್ನಡ-ಕನ್ನಡಿಗರ-ಕರ್ನಾಟಕ: ಸ್ಥಿತಿ-ಗತಿ ಕುರಿತು ವಿಚಾರಗೋಷ್ಠಿ, ನಾಡುನುಡಿ ಕುರಿತು ಕವಿಗೋಷ್ಠಿ, ವಿವಿಧ ಕ್ಷೇತ್ರಗಳ ಸಾಧಕರಿಗೆ ಅಭಿನಂದನೆ, ಸಂಜೆ 5.30ಕ್ಕೆ ಸಮಾರೋಪ ಕಾರ್ಯಕ್ರಮ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಸಮ್ಮೇಳನದ ಆಯೋಜಕರಾದ ಕೆ.ಎಸ್.ಶಿವರಾಮು, ಎಂ.ಚಂದ್ರಶೇಖರ್, ಎಸ್.ಬಿ.ಎಂ ಮಂಜು, ರವಿ ಮಂಚೇಗೌಡನಕೊಪ್ಪಲು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net