

ಹೆಬ್ರಿ: ಯೋಗ ಜೀವನಕ್ರಮವನ್ನು ಕಲಿಸುತ್ತದೆ. ನಾವು ಕ್ರಮಬದ್ಧವಾಗಿ ಕುಳಿತುಕೊಳ್ಳುವುದು, ನಿಂತುಕೊಳ್ಳುವುದು ಕೂಡ ಯೋಗದ ಭಾಗವಾಗಿದೆ. ನಿರಂತರ ಯೋಗಾಭ್ಯಾಸದಲ್ಲಿ ತೊಡಗಿಕೊಂಡು ನಿರೋಗಿಗಳಾಗಿ ಎಂದು ಹೆಬ್ರಿ ತಹಸೀಲ್ದಾರ್ ಎಸ್.ಎ.ಪ್ರಸಾದ್ ಹೇಳಿದರು.
ಅಮೃತ ಭಾರತಿ ಟ್ರಸ್ಟ್ ಹೆಬ್ರಿ, ಪಾಂಡುರಂಗ ರಮಣ ನಾಯಕ್ ಅಮೃತ ಭಾರತಿ ಸಮೂಹ ಶಿಕ್ಷಣ ಸಂಸ್ಥೆಗಳು, ಸೀತಾನದಿ ಸೌಖ್ಯ ಯೋಗ ಟ್ರಸ್ಟ್ ಹೆಬ್ರಿ ಮತ್ತು ಕ್ರೀಡಾ ಭಾರತಿ ಹೆಬ್ರಿ ತಾಲೂಕು ಘಟಕ ಸಂಯುಕ್ತ ಆಶ್ರಯದಲ್ಲಿ ಅಮೃತ ಭಾರತಿ ಸಭಾಂಗಣದಲ್ಲಿ ವಿಶ್ವ ಯೋಗ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
ಅಮೃತ ಭಾರತಿ ಟ್ರಸ್ಟ್ ಕಾರ್ಯದರ್ಶಿ ಎಚ್.ಗುರುದಾಸ್ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಅಂತಾರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ ಪದಕ ವಿಜೇತ ಶಿಕ್ಷಕ ನಿತ್ಯಾನಂದ ಶೆಟ್ಟಿ ಶಿವಪುರ ಅವರನ್ನು ಸನ್ಮಾನಿಸಲಾಯಿತು.
ಸೀತಾನದಿ ಸೌಖ್ಯ ಯೋಗ ಟ್ರಸ್ಟ್ ಅಧ್ಯಕ್ಷ ಸೀತಾನದಿ ವಿಠ್ಠಲ ಶೆಟ್ಟಿ, ಟ್ರಸ್ಟ್ ಸದಸ್ಯ ಯೋಗೀಶ್ ಭಟ್, ಬಾಲಕೃಷ್ಣ ಮಲ್ಯ, ಹಾಸ್ಟೆಲ್ ಕಮಿಟಿ ಸದಸ್ಯ ರಾಮಕೃಷ್ಣ ಆಚಾರ್ಯ, ಸೌಖ್ಯ ಯೋಗ ಟ್ರಸ್ಟ್ ಉಪಾಧ್ಯಕ್ಷ ವಾದಿರಾಜ್ ಶೆಟ್ಟಿ, ಕ್ರೀಡಾ ಭಾರತಿ ಕಾರ್ಯದರ್ಶಿ ವಿಜಯಕುಮಾರ್ ಶೆಟ್ಟಿ ಉಪಸ್ಥಿತರಿದ್ದರು. ವಿಜಯ್ ಕುಮಾರ್ ನಿರೂಪಿಸಿ, ವಾದಿರಾಜ್ ಶೆಟ್ಟಿ ವಂದಿಸಿದರು.