

ನಂಜನಗೂಡು : ಡಾ.ಅಂಬೇಡ್ಕರ್ ಅವರು ರಚಿಸಿರುವ ಸಂವಿಧಾನದಿಂದ ನಮ್ಮೆಲ್ಲರ ಬದುಕು ಹಸನಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಚಿವ ಡಾ.ಎಚ್.ಸಿ. ಮಹದೇವಪ್ಪ ಹೇಳಿದರು.
ತಾಲೂಕಿನ ಹುಲ್ಲಹಳ್ಳಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವ ಉಳಿಯಬೇಕಾದರೆ ನಾವೆಲ್ಲರೂ ಸಂವಿಧಾನವನ್ನು ರಕ್ಷಣೆ ಮಾಡಬೇಕು ನಮ್ಮ ಸರಕಾರ ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಶಾಲೆ, ಕಾಲೇಜುಗಳಲ್ಲಿ ಪ್ರತಿದಿನ ತಪ್ಪದೇ ಸಂವಿಧಾನದ ಸಂವಿಧಾನದ ಪೀಠಿಕೆಯನ್ನು ಓದಬೇಕೆಂಬ ಸೂಚನೆಯನ್ನು ನೀಡಲಾಯಿತು. ಇದರಿಂದ ಮೂರು ವರ್ಷದ ಮಕ್ಕಳು ಕೂಡ ಮಗ್ಗಿ ಪಾಠ ಹೇಳುವ ರೀತಿ ಸಂವಿಧಾನ ಹೇಳುತ್ತಿದ್ದಾರೆ ಎಂದರು.
ಇನ್ನು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಿಸುವ ಮೂಲಕ ಪಾಲಕರು ಅವರ ಭವಿಷ್ಯವನ್ನು ಉತ್ತಮಪಡಿಸಿಸಬೇಕು. ಸದೃಢ ದೇಶ ನಿರ್ಮಿಸಲು ಎಲ್ಲರೂ ಡಾ. ಅಂಬೇಡ್ಕರ್ ಅವರ ಸಿದ್ಧಾಂತದಲ್ಲಿ ನಂಬಿಕೆ ಇಟ್ಟು ಸಾಗಬೇಕು. ಆ ಮೂಲಕ ಸಮೃದ್ಧ ಭಾರತ ನಿರ್ಮಾಣವಾಗಲಿದ್ದು, ಈ ನಿಟ್ಟಿನಲ್ಲಿ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದರು.
ಇದಕ್ಕೂ ಮುನ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮೆರವಣಿಗೆಗೆ ಚಾಲನೆ ನೀಡಿದರು. ಅಂಬೇಡ್ಕರ್ ಜಯಂತಿ ಪ್ರಯುಕ್ತ ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.
ಕಾರ್ಯಕ್ರಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕರಾದ ಬಿ.ಹರ್ಷವರ್ಧನ್, ಕಳಲೆ ಕೇಶವಮೂರ್ತಿ, ಕಾಂಪೋಸ್ಟ್ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್. ಮಹದೇವಯ್ಯ, ಮಾಜಿ ಮಹಾಪೌರ ಪುರುಷೋತ್ತಮ್, ಗ್ರಾಮ ಪಂಚಾಯತಿ ಅಧ್ಯಕ್ಷೆ ದೇವಮ್ಮ ಹುಚ್ಚಯ್ಯ, ಉಪಾಧ್ಯಕ್ಷ ಎಚ್.ಪಿ.ಲೋಕೇಶ್, ಸದಸ್ಯರಾದ ಎಚ್.ಜೆ.ಮಲ್ಲಿಕಾರ್ಜುನ, ಕುಮಾರ್ ಚೌಡಯ್ಯ, ಅನ್ಸರ್ ಅಹಮದ್, ಪ್ರತಾಪ್, ಸೋಮಶೇಖರ್, ನಾಗೇಂದ್ರ, ಮಾಜಿ ಸದಸ್ಯ ನದೀಮ್ ಅಹಮದ್, ಮರಿಸ್ವಾಮಿ, ತಾಪಂ ಮಾಜಿ ಅಧ್ಯಕ್ಷ ನಾಗೇಶ್ ರಾಜು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಮಾರುತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀಕಂಠ ನಾಯಕ ಸೇರಿದಂತೆ ಭೀಮ ಬಳಗ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಯುವಕ ಸಂಘದ ಪದಾಧಿಕಾರಿಗಳು ಹಾಜರಿದ್ದರು.