

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಮಣಪುರಂ ಫೈನಾನ್ಸ್ ಲಿ, ಸ್ಟೋರ್‌ಕಿಂಗ್, ಭರತ್ ಫೈನಾನ್‌ಷಿಯಲ್ ಇನ್‌ಕ್ಲೂಷನ್ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲು ಜ.10ರಂದು ನಗರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.
ಸೇಲ್ಸ್ ಎಕ್ಸಿಕ್ಯೂಟಿವ್, ಸ್ಟೋರ್ ಇನ್‌ಚಾರ್ಜ್, ಅಸೋಸಿಯೇಟ್, ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಹಾಗೂ ಸ್ನಾತಕೊತ್ತರ ಪದವಿ ಉತ್ತೀರ್ಣರಾದ 18 ರಿಂದ 40 ವರ್ಷದೊಳಗಿನವರು ತಮ್ಮ ವ್ಯಾಸಂಗಕ್ಕೆ ಸಂಬಂಧಿಸಿದ ದಾಖಲೆಯೊಂದಿಗೆ ಬೆಳಗ್ಗೆ 10.30ಕ್ಕೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಿರುವ ಸಂದರ್ಶನದಲ್ಲಿ ಭಾಗವಹಿಸಬಹುದು. ಮಾಹಿತಿಗೆ ದೂ.ಸಂ. 08232-295124, ಮೊ.ಸಂ 9164642684, 8970646629, 8660061488 ಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.