ಏ.11ರಂದು ನೇರ ಸಂದರ್ಶನ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಿಂದ ಆಯೋಜನೆ

job
Published on

ಮಂಡ್ಯ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಪವನ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಶೋರೂಂನಲ್ಲಿ ಖಾಲಿ ಇರುವ 60 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಏ.11ರಂದು ನಗರದಲ್ಲಿ ನೇರ ಸಂದರ್ಶನ ಆಯೋಜಿಸಲಾಗಿದೆ.

ಬಿಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯೂಟಿವ್ ಮತ್ತು ಟೆಲಿಕಾಲರ್ಸ್‌ ಹುದ್ದೆಗೆ ಪಿಯುಸಿ, ಡಿಪ್ಲೊಮೊ ಹಾಗೂ ಯಾವುದೇ ಪದವಿ ಹೊಂದಿರುವ 18ರಿಂದ 35 ವರ್ಷದೊಳಗಿನವರನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಮಾಸಿಕ 12 ರಿಂದ 20 ಸಾವಿರ ರೂ ವೇತನದ ಜತೆಗೆ ಪಿಎಫ್, ಇಎಸ್‌ಐ ಸೌಲಭ್ಯ ನೀಡಲಾಗುವುದು. ಆಸಕ್ತರು ಅಂದು ಬೆಳಗ್ಗೆ 10ಗಂಟೆಗೆ ಬೆಂಗಳೂರು-ಮೈಸೂರು ರಸ್ತೆಯ ಕಲ್ಲಹಳ್ಳಿಯಲ್ಲಿರುವ ಸೋಮೇಶ್ವರ ಭವನದ ಎದುರಿನ ಶೋರೂಂನಲ್ಲಿ ನಡೆಯಲಿರುವ ಸಂದರ್ಶನದಲ್ಲಿ ಭಾಗವಹಿಸಬಹುದೆಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net