

ಕಾನಹೊಸಹಳ್ಳಿ: ಗೋಶಾಲೆಯ ಜಾನುವಾರುಗಳಿಗೆ ಮೇವು ನೀರಿನ ಜತೆಗೆ ಸೂಕ್ತ ನೆರಳಿನ ವ್ಯವಸ್ಥೆ ಕಲ್ಪಿಸಿ ಎಂದು ಶಾಸಕ ಡಾ.ಎನ್.ಟಿ.ಶ್ರೀನಿವಾಸ್ ಹೇಳಿದರು.
ಇದನ್ನು ಓದಿ: ಜಾನುವಾರು ಸಾಗಿಸುತ್ತಿದ್ದ ಲಾರಿ ಮೇಲೆ ದಾಳಿ
ಗಂಡಬೊಮ್ಮನಹಳ್ಳಿಯ ಗೋಶಾಲೆಗೆ ಬುಧವಾರ ಭೇಟಿ ನೀಡಿ ಮಾತನಾಡಿ, ಕೂಡ್ಲಿಗಿ ತಾಲೂಕಿನಲ್ಲಿ ಮೊದಲ ಸರ್ಕಾರಿ ಗೋಶಾಲೆ ಆರಂಭವಾಗಿದ್ದು, ಸುಮಾರು 2ಸಾವಿರಕ್ಕೂ ಹೆಚ್ಚು ಜಾನುವಾರುಗಳಿದ್ದು, ಇವುಗಳಿಗೆ ಮೇವು ನೀರು ಮತ್ತು ನೆರಳಿನ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ತಿಳಿಸಿದರು.
ತಾತ್ಕಾಲಿಕ ಶೆಡ್ ನಾಲ್ಕೈದು ದಿನದಲ್ಲಿ ಪೂರ್ಣಗೊಳಿಸಬೇಕು ಅಲ್ಲದೆ ಅಗತ್ಯವಿರುವ ನೀರಿನ ತೊಟ್ಟಿ ಕಾಮಗಾರಿ ಆರಂಭಿಸಬೇಕು ಎಂದರು.
ಮುಂಗಾರು ಆರಂಭವಾದರೂ ಮಳೆ ಬರುವ ಲಕ್ಷಣ ಕಾಣುತ್ತಿಲ್ಲ ಅದಕ್ಕೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚಿಸಿ ನೀರಿನ ವ್ಯವಸ್ಥೆ ಮಾಡಲಾಗುವುದು ಎಂದರು.