

ಗೌರಿಬಿದನೂರು: ಆರೋಗ್ಯಪೂರ್ಣ ಪರಿಸರದಲ್ಲಿ ಗೌರವಯುತವಾಗಿ ಜೀವನ ನಡೆಸುವುದು ಮುಖ್ಯವಾಗಿದೆ ಎಂದು ಪುರಸಭೆ ಮಾಜಿ ಸದಸ್ಯ ಆರ್. ಅಶೋಕ್ ಕುಮಾರ್ ಹೇಳಿದರು.
ನಗರದ ವಾಲ್ಮೀಕಿ ಸಮುದಾಯ ಭವನದಲ್ಲಿ ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಘಟನೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ ತಾಲೂಕು ಪದಾಧಿಕಾರಿಗಳ ಪದಗ್ರಹಣ ಹಾಗೂ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿ, ಬಡವ-ಬಲ್ಲಿದ ಎನ್ನದೇ ಎಲ್ಲರ ಹಕ್ಕುಗಳು ರಕ್ಷಣೆಯಾಗಬೇಕು. ಮೂಲಭೂತ ಹಕ್ಕುಗಳಿಗೆ ಉಲ್ಲಂಘನೆಯಾಗದಂತೆ ನೋಡಿಕೊಳ್ಳಬೇಕು. ಎಲ್ಲರೂ ಕರ್ತವ್ಯ ನಿರ್ವಹಣೆಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯಾಗದಂತೆ ಎಚ್ಚರವಹಿಸಬೇಕು. ಪ್ರತಿಯೊಬ್ಬರಿಗೂ ಘನತೆಯಿಂದ ಜೀವನ ನಡೆಸುವ ಹಕ್ಕು ಇದೆ ಎಂಬುದನ್ನು ಅರಿಯಬೇಕು ಎಂದರು.
ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಘಟನೆ ಸಂಸ್ಥಾಪಕ ಕೆ.ಎಸ್.ಅರುಣ್ ಕುಮಾರ್ ಮಾತನಾಡಿ, ಪ್ರತಿ ಕೆಲಸದಲ್ಲೂ ಮಾನವ ಹಕ್ಕುಗಳ ರಕ್ಷಣೆ ಮಾಡಬೇಕು. ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಬೇಕು. ಮಹಿಳೆಯರು, ಅಶಕ್ತರು, ಅಂಗವಿಕಲರು ಮಕ್ಕಳ ಹಕ್ಕುಗಳ ಬಗ್ಗೆ ಗಮನಹರಿಸಬೇಕು ಎಂದು ಹೇಳಿದರು.
ಪದಾಧಿಕಾರಿಗಳು:
ಸಂಘಟನೆ ರಾಜ್ಯ ಉಪಾಧ್ಯಕ್ಷರಾಗಿ ಎನ್.ಪುಟ್ಟರಂಗಯ್ಯ, ಸಲಹೆಗಾರರಾಗಿ ಡಾ.ಬಿ.ಎನ್.ಮೋಹನ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಮುದ್ದುಕೃಷ್ಣ, ತಾಲೂಕು ಉಪಾಧ್ಯಕ್ಷರಾಗಿ ರಾಮಾಂಜನೇಯ, ಕಾರ್ಯದರ್ಶಿಯಾಗಿ ವಿ, ಶ್ರೀನಿವಾಸ, ಮಹಿಳಾ ಘಟಕದ ತಾಲೂಕು ಅಧ್ಯಕ್ಷರಾಗಿ ವಿ.ಚಂದ್ರಕಲಾ, ಮಹಿಳಾ ಘಟಕದ ತಾಲೂಕು ಕಾರ್ಯದರ್ಶಿಯಾಗಿ ಗಂಗಮ್ಮ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಎಸ್.ವಿ. ಶ್ರೀನಿವಾಸ್, ಗುಡಿಬಂಡೆ ತಾಲೂಕು ಅಧ್ಯಕ್ಷರಾಗಿ ರಾಮಕೃಷ್ಣಪ್ಪ, ಉಪಾಧ್ಯಕ್ಷರಾಗಿ ನರಸಿಂಹಮೂರ್ತಿ, ಸದಸ್ಯರಾಗಿ ಆರ್.ಜಿ.ರಾಮಾಂಜಿನಪ್ಪ, ಸುಪ್ರಿಯಾ, ಆರ್.ಗೋಪಾಲ್, ಅವರಿಗೆ ಮಾನವ ಹಕ್ಕುಗಳು ಮತ್ತು ಮಾಧ್ಯಮ ಸಂಘಟನೆ ರಾಜ್ಯ ಸಂಸ್ಥಾಪಕ ಕೆ.ಎಸ್.ಅರುಣ್ ಕುಮಾರ್ ಆದೇಶ ಪತ್ರ ಹಾಗೂ ಗುರುತಿನ ಚೀಟಿ ನೀಡಿದರು.
ಸಂಘಟನಾ ಕಾರ್ಯದರ್ಶಿ ನವೀನ್ ಕುಮಾರ್, ರಾಜ್ಯ ಯುವ ಘಟಕದ ಅಧ್ಯಕ್ಷ ಮಹೇಶ್, ಚಾರ್ ಫೌಂಡೇಶನ್ ಸಂಸ್ಥಾಪಕ ಅಧ್ಯಕ್ಷ ವೆಂಕಟೇಶಯ್ಯ,ರಾಜ್ಯ ಪ್ರಧಾನ ಕಾರ್ಯದರ್ಶಿ ದೇವರಾಜ್, ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ನಾಗರತ್ನ, ರಾಜ್ಯ ಸಂಘಟನಾ ಕಾರ್ಯದರ್ಶಿ ಕನ್ನಿಕಾ ಇತರರು ಇದ್ದರು.