

ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಪಲ್ಟಿಯಾದ ಘಟನೆ ತಾಲೂಕಿನ ಆರತಿಬೈಲ್ ಘಟ್ಟದಲ್ಲಿ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ಮಂಗಳವಾರ ನಡೆದಿದೆ. ಸರಕು ತುಂಬಿದ ಲಾರಿ ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ವೇಳೆ, ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಲಾರಿ ಅಲ್ಪ ಪ್ರಮಾಣದಲ್ಲಿ ಜಖಂಗೊಂಡಿದ್ದು, ಚಾಲಕ-ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.