ಸರಕು ತುಂಬಿದ ಲಾರಿ ಪಲ್ಟಿ

19 ylp 03 (lari)
Published on

ಯಲ್ಲಾಪುರ: ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 63ರ ಮೇಲೆ ತಾಲೂಕಿನ ಕಣ್ಣಿಮನೆ ಕ್ರಾಸ್ ಬಳಿ ನಡೆದಿದೆ. ಸರಕು ತುಂಬಿಕೊಂಡು ಅಂಕೋಲಾ ಕಡೆಯಿಂದ ಯಲ್ಲಾಪುರ ಕಡೆಗೆ ಬರುತ್ತಿದ್ದ ಲಾರಿ, ಆರತಿಬೈಲ್ ಘಟ್ಟದ ಬಳಿ ಹೆದ್ದಾರಿ ಪಕ್ಕದ ಗಟಾರದಲ್ಲಿ ಉರುಳಿ ಬಿದ್ದಿದೆ. ಘಟನೆಯಲ್ಲಿ ಲಾರಿ ಜಖಂಗೊಂಡಿದೆ. ಚಾಲಕ, ನಿರ್ವಾಹಕರು ಅಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net