ಉನ್ನತ ವ್ಯಾಸಂಗಕ್ಕೆ ಸಾಲ ಸೌಲಭ್ಯ

Students visit bank
Published on

ಮುಂಡರಗಿ: ಉನ್ನತ ಶಿಕ್ಷಣ ಪಡೆದುಕೊಳ್ಳಲು ವಿದ್ಯಾರ್ಥಿಗಳಿಗೆ ಬ್ಯಾಂಕ್‌ಗಳು ಸಾಲ ನೀಡುತ್ತವೆ. ವಿದ್ಯಾರ್ಥಿಗಳು ಅದರ ಸದುಪಯೋಗ ಪಡೆದುಕೊಂಡು ಉನ್ನತ ವ್ಯಾಸಂಗ ಪೂರ್ಣಗೊಳಿಸಬೇಕು ಎಂದು ಸ್ಥಳೀಯ ಎಸ್‌ಬಿಐ ಬ್ಯಾಂಕ್ ಶಾಖಾ ವ್ಯವಸ್ಥಾಪಕ ಸತೀಶ ರೆಡ್ಡಿ ಹೇಳಿದರು.

ಪಟ್ಟಣದ ಕೆ.ಆರ್. ಬೆಲ್ಲದ ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗಾಗಿ ಶನಿವಾರ ಹಮ್ಮಿಕೊಂಡಿದ್ದ ಬ್ಯಾಂಕ್ ಮಾಹಿತಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಐಬಿಪಿಎಸ್ ಸೇರಿದಂತೆ ಬ್ಯಾಂಕ್‌ಗಳಲ್ಲಿ ಹಲವು ಉದ್ಯೋಗಾವಕಾಶಗಳು ಲಭ್ಯವಿದ್ದು, ವಿದ್ಯಾರ್ಥಿಗಳು ಅವುಗಳತ್ತ ಗಮನ ಹರಿಸಬೇಕು ಎಂದು ಸಲಹೆ ನೀಡಿದರು.

ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ.ಆರ್.ಎಚ್. ಜಂಗನವಾರಿ ಮಾತನಾಡಿ, ವಿದ್ಯಾರ್ಥಿಗಳು ಪಠ್ಯಪುಸ್ತಕದ ಅಧ್ಯಯನದ ಜತೆಗೆ ಪ್ರಾಯೋಗಿಕ ಶಿಕ್ಷಣ ಕಲಿಯುವುದು ಉತ್ತಮ. ವಾಣಿಜ್ಯಶಾಸ್ತ್ರ, ಅರ್ಥಶಾಸ್ತ್ರ ಹಾಗೂ ಮತ್ತಿತರ ವಿಷಯಗಳನ್ನು ಪ್ರಾತ್ಯಕ್ಷಿಕೆ ಮೂಲಕ ಕಲಿತರೆ ಅದು ಪರಿಣಾಮಕಾರಿಯಾಗುತ್ತದೆ ಎಂದರು.

ಪ್ರಾಚಾರ್ಯ ಡಾ. ಡಿ.ಸಿ. ಮಠದ, ಉಪನ್ಯಾಸಕಿ ಕೌಶಲ್ಯಾ ಜಮಾದಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net