

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವತಿಯಿಂದ 2023-24 ನೇ ಸಾಲಿನ ವಿವಿಧ ಸಾಲ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.
ಸ್ವಯಂ ಉದ್ಯೋಗ ನೇರ ಸಾಲ ಯೋಜನೆ, ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆ, ವಾಸವಿ ಜಲಶಕ್ತಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯನ್ನು www.kacdc.karnataka.gov.in ವೆಬ್‌ಸೈಟ್ ಮೂಲಕ ಸೆಪ್ಟೆಂಬರ್ 18ರ ಒಳಗೆ ಸಲ್ಲಿಸಬಹುದು. ಅಭ್ಯರ್ಥಿಗಳು ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು. ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ- ಬಿ ಪಡೆದಿರಬೇಕು.
ಆಯ್ಕೆ ನಡೆಸುವಾಗ ಸಮಿತಿಯು ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5, ತೃತೀಯ ಲಿಂಗಿಗಳಿಗೆ ಶೇ.5 ಮೀಸಲಾತಿ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ 94484 51111 ಅಥವಾ ಜಿಲ್ಲಾ ಕಚೇರಿ ದೂ.0821-23411947 ಸಂಪರ್ಕಿಸಲು ಕೋರಲಾಗಿದೆ.