ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Money
Published on

ಬೆಳಗಾವಿ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ 2020-21ನೇ ಸಾಲಿನಲ್ಲಿ ವಿವಿಧ ಸಮುದಾಯಗಳಿಂದ ಸಾಂಪ್ರಾದಾಯಿಕ ವೃತ್ತಿದಾರರ ಸಾಲ ಯೋಜನೆ ಮತ್ತು ಸ್ವಯಂ ಉದ್ಯೋಗ ಸಾಲ ಯೋಜನೆಯಲ್ಲಿ ಸಾಲ ಮತ್ತು ಸಹಾಯಧನ ನೀಡಲು ಅರ್ಜಿ ಆಹ್ವಾನಿಸಿದೆ.

ಸವಿತಾ ಹಾಗೂ ಮಡಿವಾಳ ಸಮಾಜಕ್ಕೆ ಸೇರಿದ ವಿವಿಧ ಜಾತಿ ಜನ ಸಾಂಪ್ರಾದಾಯಿಕ ವೃತ್ತಿದಾರರ ಸಾಲ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, ಸ್ವ ಸಹಾಯ ಗುಂಪುಗಳ ಮೂಲಕ ಸಾಲ ಮತ್ತು ಸಹಾಯಧನ, ಗಂಗಾ ಕಲ್ಯಾಣ ನೀರಾವರಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸಬಹುದು.

ಅರ್ಹರು ವೆಬ್‌ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಇಲ್ಲದಿದ್ದಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿಗೆ ಆ. 3ರ ಒಳಗೆ ಸಲ್ಲಿಸಬೇಕು ಎಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net