ರಾಜ್ಯಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಸ್ಥಳೀಯ ಮಟ್ಟದ ಆಯ್ಕೆ ಶಿಬಿರ

Published on

ಬೆಂಗಳೂರು: ಬೆಂಗಳೂರಿನ ಬಾಲ ಭವನ ಸೊಸೈಟಿಯು ಮಕ್ಕಳಿಗಾಗಿ ವಿವಿಧ ಚಟುವಟಿಕೆಗಳನ್ನು ನಡೆಸುತ್ತಿದ್ದು, ಮಕ್ಕಳ ದಿನಾಚರಣೆ -2024 ರ ಅಂಗವಾಗಿ ಬೆಂಗಳೂರು ನಗರ ಜಿಲ್ಲೆಯ 9 ರಿಂದ 16 ವರ್ಷದೊಳಗಿನ ಮಕ್ಕಳಿಗೆ ನವೆಂಬರ್ 7 ರಂದು ಬೆಳಿಗ್ಗೆ 11 ಗಂಟೆಗೆ ರಾಜ್ಯ ಮಟ್ಟದ ಕಲಾಶ್ರೀ ಪ್ರಶಸ್ತಿಗಾಗಿ ಆಯ್ಕೆ ಶಿಬಿರವನ್ನು ಆಯೋಜಿಸಲಾಗಿದೆ.

ಈ ಶಿಬಿರದಲ್ಲಿ ಸೃಜನಾತ್ಮಕ ಕಲೆ, ಸೃಜನಾತ್ಮಕ ಬರವಣಿಗೆ, ಸೃಜನಾತ್ಮಕ ಪ್ರದರ್ಶನ ಕಲೆ ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಈ ಪ್ರಕಾರಗಳಲ್ಲಿ ಏರ್ಪಡಿಸಲಾಗಿದೆ.

ಸೃಜನಾತ್ಮಕ ಪ್ರದರ್ಶನ ಕಲೆ - ಶಾಸ್ತ್ರೀಯ ನೃತ್ಯ ಜಾನಪದ ನೃತ್ಯ, ಕರ್ನಾಟಕ ಅಥವಾ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಸುಗಮ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಏಕಪಾತ್ರಾಭಿನಯ, ಯೋಗದೊಂದಿಗೆ ನೃತ್ಯ ಇತ್ಯಾದಿ ಯಾವುದಾದರೊಂದು ಕಲೆಯನ್ನು ಮಾತ್ರ ಪ್ರದರ್ಶಿಸಲು ಅವಕಾಶವಿರುತ್ತದೆ.

ಸೃಜನಾತ್ಮಕ ಕಲೆ - ಚಿತ್ರಕಲೆ, ಕರಕುಶಲೆ, ಜೇಡಿಮಣ್ಣಿನ ಕಲೆ ಈ ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು. ಹಾಳೆ ಮತ್ತು ಜೇಡಿಮಣ್ಣು ನೀಡಲಾಗುವುದು, ಕರಕುಶಲ ಸಾಮಗ್ರಿಗಳನ್ನು ತಂದು ಸ್ಥಳದಲ್ಲೇ ತಯಾರಿಸಬೇಕು.

ಸೃಜನಾತ್ಮಕ ಬರವಣಿಗೆ - ಕಥೆ, ಕವನ, ಪ್ರಬಂಧ ಬರೆಯುವುದು ಈ ಮೂರರಲ್ಲೂ ಕಡ್ಡಾಯವಾಗಿ ಭಾಗವಹಿಸಬೇಕು

ವಿಜ್ಞಾನದಲ್ಲಿ ನೂತನ ಅವಿಷ್ಕಾರ - ವಿಜ್ಞಾನಕ್ಕೆ ಸಂಬಂಧಪಟ್ಟಂತೆ ಒಂದು ವಿಷಯದ ಬಗ್ಗೆ, ಮಾದರಿ ಪ್ರದರ್ಶನ ಹಾಗೂ ವಿವರಣೆ ಮತ್ತು ವಿಜ್ಞಾನ ಕ್ಷೇತ್ರಕ್ಕೆ ಸಂಬಂಧಿಸಿದಂತೆ ತೀರ್ವುಗಾರರ ಇನ್ನಿತರ ಪ್ರಶ್ನೆಗಳಿಗೆ ಉತ್ತರ ನೀಡುವುದು.

ಈ ಪ್ರಕಾರಗಳಲ್ಲಿ ಪ್ರಾವೀಣ್ಯತೆ ಹೊಂದಿರುವ 09-16 ವರ್ಷದ ಮಕ್ಕಳು ಸ್ಮಳೀಯ ಮಟ್ಟದ ಆಯ್ಕೆಯಲ್ಲಿ ಪಾಲ್ಗೊಂಡು, ಆಯ್ಕೆಯಾದಲ್ಲಿ ನವಂಬರ್-2024ರ ಮಾಹೆಯಲ್ಲಿ ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಕಲಾಶ್ರೀ ಶಿಬಿರದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗುವುದು.

ಹೆಚ್ಚಿನ ವಿವರಗಳಿಗೆ ಹಾಗೂ ನೂಂದಣಿಗಾಗಿ ಕಾರ್ಯದರ್ಶಿಗಳ ಕಛೇರಿ, ಬಾಲ ಭವನ ಸೊಸೈಟಿ, ಬೆಂಗಳೂರು-560001, ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-22864189 ಮೂಲಕ ಸಂಪರ್ಕಿಸಬಹುದಾಗಿದೆ ಎಂದು ಬಾಲ ಭವನ ಸೊಸೈಟಿಯ ಕಾರ್ಯದರ್ಶಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net