ಅವೈಜ್ಞಾನಿಕ ಹೆದ್ದಾರಿ, ಕಳಪೆ ಕಾಮಗಾರಿಗೆ ಸ್ಥಳೀಯರ ಆಕ್ರೋಶ

IMG-20241004-WA0177
Published on
ಚಿಕ್ಕಬಳ್ಳಾಪುರ: ರಸ್ತೆ ಹಾಗೂ ಚರಂಡಿ ಕಾಮಗಾರಿಗಳನ್ನು ಅವೈಜ್ಞಾನಿಕವಾಗಿ ನಡೆಸಲಾಗುತ್ತಿದೆ ಎಂದು ಆರೋಪಿಸಿ ಗೌರಿಬಿದನೂರು ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ಸ್ಥಳೀಯರು, ರಾಷ್ಟ್ರೀಯ ಹೆದ್ದಾರಿ 69ನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಹೆದ್ದಾರಿ ಕಾಮಗಾರಿಯಿಂದ ಮನೆಗಳಿಗೆ ಸರಿಯಾಗಿ ನೀರು ಬರುತ್ತಿಲ್ಲ. ಒಳ್ಳೆಯ ಗೇಜ್ ಇರುವ ಪೈಪ್ ಗಳನ್ನು ಅಳವಡಿಸುತ್ತಿಲ್ಲ. ಕಡಿಮೆ ಸಾಮರ್ಥ್ಯದ ಪೈಪ್ ಅಳವಡಿಸುತ್ತಿದ್ದು, ಸ್ವಲ್ಪ ಸಮಯದಲ್ಲೇ ಹಾಳಾಗುತ್ತಿವೆ. ಚರಂಡಿ ಕಾಮಗಾರಿ ಕಳಪೆಯಾಗಿದೆ. ರಸ್ತೆ ಕಾಮಗಾರಿ ವೇಳೆ ನೀರು ಹಾಕದ ಕಾರಣ ಧೂಳು ಹೆಚ್ಚಾಗಿದೆ. ಜನರ ಉಸಿರಾಟಕ್ಕೂ ತೊಂದರೆಯಾಗುತ್ತಿದೆ. ಅಪಘಾತಗಳು ಸಂಭವಿಸುತ್ತಿವೆ. ಈ ಬಗ್ಗೆ ಗುತ್ತಿಗೇದಾರರು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳನ್ನು ಪ್ರಶ್ನಿಸಿದರೆ ಬೇಜವಾಬ್ದಾರಿ ಉತ್ತರ ನೀಡುತ್ತಾರೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದರು. ಹೆದ್ದಾರಿ ಬಂದ್ ಮಾಡಿದ್ದರಿಂದ ಗೌರಿಬಿದನೂರು ಚಿಕ್ಕಬಳ್ಳಾಪುರ ಮಾರ್ಗದಲ್ಲಿ ಕಿ.ಮೀ ಉದ್ದ ವಾಹನಗಳು ಸಾಲುಗಟ್ಟಿ ನಿಂತು ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net