ಮಂಗಳೂರು: ಪ್ರಸಿದ್ಧ ದೇವರಗುಂಡಿ ಫಾಲ್ಸ್ ಬಳಿ ಮಾಡೆಲ್ಗಳು ಅರೆಬೆತ್ತಲೆ ಫೋಟೊಶೂಟ್ ನಡೆಸಿರುವುದು ಸ್ಥಳೀಯ ಆಕ್ರೋಶಕ್ಕೆ ಕಾರಣವಾಗಿದೆ.
ಸುಳ್ಯ ತಾಲೂಕಿನ ತೋಡಿಕಾನ ಗ್ರಾಮದ ದೇವರಗುಂಡಿ ಫಾಲ್ಸ್ ಬಳಿ ಬೆಂಗಳೂರಿನ ಬಿಕನಿ ಸುಂದರಿಯರು ಅರೆಬೆತ್ತಲಾಗಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಮಾಡೆಲ್ ಬೃಂಧಾ ಅರಸ್ ಸೇರಿದಂತೆ ಇಬ್ಬರು ಮಾಡೆಲ್ಗಳು ಇದರಲ್ಲಿ ಭಾಗಿಯಾಗಿದ್ದಾರೆ. ಅದಕ್ಕೆ ಸಂಬಂಧಿಸಿದ ಫೋಟೋಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ದೇವರಗುಂಡಿ ಫಾಲ್ಸ್ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಸಂಬಂಧಿಸಿದೆ. ದೇವಸ್ಥಾನದಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿರುವ ದೇವರಗುಂಡಿ ಫಾಲ್ಸ್ನಲ್ಲಿ ಸಾಕ್ಷಾತ್ ಶಿವನೇ ಸ್ನಾನಕ್ಕೆ ಬರುತ್ತಿದ್ದ ಅನ್ನೊ ಐತಿಹ್ಯವಿದೆ. ಇದರಿಂದ ಸ್ಥಳೀಯರೇ ಆ ಫಾಲ್ಸ್ಗೆ ಇಳಿದು ಸ್ನಾನ ಮಾಡುವುದಿಲ್ಲ. ಇಂತಹ ಪವಿತ್ರ ಸ್ಥಳದಲ್ಲಿ ಅರೆಬೆತ್ತಲಾಗಿ ಫೋಟೋಶೂಟ್ ಮಾಡಿಸಿರುವುದು ಇದೀಗ ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ದೇವಸ್ಥಾನದ ಆಡಳಿತ ಮಂಡಳಿಗೆ ಸ್ಥಳೀಯರು ದೂರು ನೀಡಿದ್ದಾರೆ. ಆದರೆ, ಫೋಟೋಶೂಟ್ಗೆ ನಾವು ಅನುಮತಿ ನೀಡಿಲ್ಲ ಎಂದು ಆಡಳಿತ ಮಂಡಳಿ ಹೇಳಿದೆ. ಆದರೂ ಗ್ರಾಮಸ್ಥರು ಮಾಡೆಲ್ಗಳ ನಡೆಯ ವಿರುದ್ಧ ಅಸಮಾಧಾನ ಹೊರಹಾಕಿದ್ದು, ಇನ್ನು ಮುಂದೆ ಇಂತಹ ಘಟನೆ ನಡೆಯದಂತೆ ನೋಡಿಕೊಳ್ಳಲು ಮಂಡಳಿಗೆ ಎಚ್ಚರಿಕೆ ನೀಡಿದ್ದಾರೆ. (ದಿಗ್ವಿಜಯ ನ್ಯೂಸ್)