

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಜೂನ್.20 ರವರೆಗೆ ಲಾಕ್ ಡೌನ್ ಮುಂದುವರಿಸುವ ಸಾಧ್ಯತೆ ಹೆಚ್ಚು.
ಈ ಕುರಿತು ಗುರುವಾರ ಸಿಎಂ ಬಿ.ಎಸ್.ಯಡಿಯೂರಪ್ಪ ಜೊತೆ ವಿಡಿಯೊ ಕಾನ್ಪರೆನ್ಸ್ ಸಭೆ ನಡೆಸಿದ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲೆಯಲ್ಲಿ ಇನ್ನೂ ಕರೊನಾ ನಿಯಂತ್ರಣಕ್ಕೆ ಬಾರದ ಕಾರಣ ಜೂನ್ 20 ರ ವರೆಗೆ ವಿಸ್ತರಣೆ ಮಾಡುವಂತೆ ಕೇಳಿ ಕೊಂಡಿದ್ದಾರೆ.
ಜೂನ್ 11 ರಂದು ಬೆಳಗ್ಗೆ ಜಿಲ್ಲೆಯ ಜನಪ್ರತಿನಿಧಿಗಳು ಸಭೆ ಸೇರಲಿದ್ದೇವೆ. ಕೈಗಾರಿಕೆಗಳು, ಕೆಲವೊಂದು ಕ್ಷೇತ್ರದಲ್ಲಿ ಕೆಲಸವಿಲ್ಲದೆ ಕಂಗೆಟ್ಟಿರುವ ಜನರಿಗಾಗಿ ಕೆಲವೊಂದು ವಿಷಯ ಸಡಿಲ ಗೊಳಿಸುವ ಬಗ್ಗೆ ಅದರಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತೇವೆ. ಸದ್ಯದಂತೆ ಬೆಳಗ್ಗೆ 6ರಿಂದ 10ರ ವರೆಗೆ ಮಾತ್ರ ಅಗತ್ಯ ವಸ್ತುಗಳ ಖರೀದಿಸಲು ಅವಕಾಶ ನೀಡಲಾಗುತ್ತದೆ ಎಂದು ಸಚಿವ ಕೋಟ ತಿಳಿಸಿದ್ದಾರೆ.