

ವಿಜಯವಾಣಿ ಸುದ್ದಿಜಾಲ ಧಾರವಾಡ
ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಽಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಽಕಾರಗಳ ಆದೇಶದ ಮೇರೆಗೆ ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಸೆ. 14ರಂದು ರಾಷ್ಟಿçÃಯ ಲೋಕ ಆದಾಲತ್ ಆಯೋಜಿಸಲಾಗುವುದು.
ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಸಿವಿಲ್ ವ್ಯಾಜ್ಯ, ಮೋಟಾರ್ ವಾಹನ ಅಪಘಾತ ಪರಿಹಾರದ ಪ್ರಕರಣಗಳು, ಭೂ ಸ್ವಾಽÃನ ಪ್ರಕರಣಗಳು, ವಿದ್ಯುತ್ ಮಂಡಳಿ ಮುಂತಾದ ಸ್ಥಳೀಯ ಸಂಸ್ಥೆಗಳ ಪರ ಮತ್ತು ವಿರುದ್ಧ ದಾಖಲಾದ ಪ್ರಕರಣಗಳು, ಬ್ಯಾಂಕ್, ಸಹಕಾರಿ ಸಂಘ, ಖಾಸಗಿ ವ್ಯಕ್ತಿಗಳ ನಡುವಿನ ಚೆಕ್ ಅಮಾನ್ಯ, ಹಣ ವಸೂಲಾತಿ ವ್ಯಾಜ್ಯಗಳು, ಜೀವನಾಂಶ, ವೈವಾಹಿಕ ಪ್ರಕರಣಗಳು (ವಿವಾಹ ವಿಚ್ಛೇದನ ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಕಾರ್ಮಿಕ ನಷ್ಟ ಪರಿಹಾರ, ವಿದ್ಯುಚ್ಛಕ್ತಿ ಮತ್ತು ನೀರಿನ ಶುಲ್ಕ ಪಾವತಿ ಪ್ರಕರಣಗಳು, ಸಾರ್ವಜನಿಕ ಸೇವೆ ಮತ್ತು ನಿವೃತ್ತಿ ವೇತನ ಪ್ರಕರಣಗಳು ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಽಕಾರದ ಅಧ್ಯಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.