ಲೋಕ್ ಅದಾಲತ್: ಒಟ್ಟು ೬೧೯೭ ಪ್ರಕರಣಗಳ ಇತ್ಯರ್ಥ

MDK04
Published on

ಮಡಿಕೇರಿ: ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಕೊಡಗು ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಮೆಗಾ ಲೋಕ್ ಅದಾಲತ್ ನಡೆಯಿತು.


ಒಟ್ಟು ಜಿಲ್ಲೆಯ ೧೩ ನ್ಯಾಯಾಲಯಗಳಲ್ಲಿ ಒಟ್ಟು ೭೭೯೧ ಪ್ರಕರಣಗಳ ಪೈಕಿ ೬೧೯೭ ಪ್ರಕರಣಗಳನ್ನು ಸಂಧಾನದ ಮೂಲಕ ಇತ್ಯರ್ಥಪಡಿಸಲಾಗಿದೆ. ಇದರಲ್ಲಿ ೪೯೨೫ ಪ್ರಕರಣಗಳು ವ್ಯಾಜ್ಯ ಪೂರ್ವ ಪ್ರಕರಣಗಳಾಗಿದ್ದರೆ, ೨೮೬೬ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣದ ಅರ್ಜಿಗಳಾಗಿದ್ದವು.


ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಾದ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣ, ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣ, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣ, ಖಾಯಂ ಜನತಾ ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣ, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣ, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಸಾರ್ವಜನಿಕ ಉಪಯುಕ್ತತೆ ಸೇವೆಗಳ ಸಂಬಂಧಿಸಿದ ಪ್ರಕರಣಗಳು, ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು, ವೈವಾಹಿಕ ಕುಟುಂಬ ನ್ಯಾಯಾಲಯ ಪ್ರಕರಣಗಳನ್ನು(ವಿಚ್ಛೇದನ ಹೊರತುಪಡಿಸಿ) ರಾಜೀ ಮೂಲಕ ನ್ಯಾಯಾಧೀಶರು ಇತ್ಯರ್ಥಗೊಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net