ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ಲೋಕ ಕಲ್ಯಾಣಾರ್ಥ ಗೋಪೂಜೆ

MNG_ 23 act kadri
ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಸನ್ನಿದಿಯಲ್ಲಿ ಬುಧವಾರ ಸಂಜೆ ಗೋಪೂಜೆ ನೆರವೇರಿತು.
Published on

ಮಂಗಳೂರು: ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಪರಂಪರೆಯ ಅವಿಭಾಜ್ಯ ಅಂಗವಾಗಿರುವ ಗೋವುಗಳ ಮಹತ್ವ ಮತ್ತು ಸಂರಕ್ಷಣೆಯ ಬಗ್ಗೆ ಜನಜಾಗೃತಿ ಮೂಡಿಸುವ ಸದುದ್ಧೇಶದಿಂದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ದೇವಸ್ಥಾನಗಳಲ್ಲಿ ದೀಪಾವಳಿಯ ಬಲಿಪಾಡ್ಯಮಿ ಹಬ್ಬದ ದಿನ ಶಾಸ್ತೋಕ್ತವಾಗಿ ಗೋ ಪೂಜೆ ನೆರವೇರಿಸುವಂತೆ ಕರ್ನಾಟಕ ಸರ್ಕಾರದ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಸೂಚನೆಯಂತೆ ಕದ್ರಿ ಶ್ರೀ ಮಂಜುನಾಥ ದೇವಸ್ಥಾನದಲ್ಲಿ ಬುಧವಾರ ಸಂಜೆ ಗೋಪೂಜೆ ನೆರವೇರಿತು.

ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ನೇತೃತ್ವದಲ್ಲಿ ಅರ್ಚಕರಾದ ಪ್ರಭಾಕರ ಅಡಿಗರ ಮೂಲಕ ಜನರ ಬದುಕಿಗೆ ಧನ, ಧಾನ್ಯ, ಐಶ್ವರ್ಯ, ಶಾಂತಿ ಮತ್ತು ಸಮೃದ್ಧಿ ಸಿಗಲಿ ಹಾಗೂ ಕರುಣೆಯ ದೃಷ್ಟಿಯಿಂದ ಎಲ್ಲ ಜೀವಿಗಳಲ್ಲಿ ದಯೆ, ಸಹಾನುಭೂತಿ ಬೆಳೆಯಲಿ ಎಂದು ವಿಶೇಷವಾಗಿ ಪ್ರಾರ್ಥಿಸಲಾಯಿತು. ಮಾಜಿ ಮೇಯರ್ ಎಂ ಶಶಿಧರ ಹೆಗ್ಡೆ, ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಪ್ಪಿ ವ್ಯವಸ್ಥಾಪನ ಸಮಿತಿಯ ಹರಿನಾಥ್, ದಿಲ್ ರಾಜ್ ಆಳ್ವ, ರಾಜೇಂದ್ರ ಚಿಲಿಂಬಿ, ಕಿರಣ್ ಕುಮಾರ್,ನಾರಾಯಣ ಕೋಟ್ಯಾನ್, ಉಷಾ ಪ್ರಭಾಕರ್, ಪ್ರೀತಾನಂದನ್ ಹಾಗೂ ಜಿಲ್ಲಾ ಧಾರ್ಮಿಕ ಪರಿಷತ್ ಸದಸ್ಯೆ ಚಂದ್ರಕಲಾ ಮುಂತಾದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net