ಲೋಕಸಭಾ ಕ್ಷೇತ್ರ ವ್ಯಾಪ್ತಿ, ನೆರೆಹೊರೆ; ಜಿಲ್ಲೆಗೆ ಅಧಿಕಾರಿಗಳ ನಿಯೋಜನೆ ಬೇಡ

Untitled design (17)
Published on

ರಾಜ್ಯಗಳಿಗೆ ಕೇಂದ್ರ ಚುನಾವಣಾ ಆಯೋಗದಿಂದ ಸ್ಪಷ್ಟ ನಿರ್ದೇಶನ

ಮೂರು ವರ್ಷ ಪೂರೈಸಿದ ನಂತರ ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಬೇರೆ ಜಿಲ್ಲೆಗೆ ನಿಯೋಜಿಸದಂತೆ ಭಾರತ ಚುನಾವಣಾ ಆಯೋಗ (ಇಸಿಐ) ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.

ಸಂಸದೀಯ ಕ್ಷೇತ್ರದ ವ್ಯಾಪ್ತಿಯ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಹಾಗೂ ಪೋಸ್ಟಿಂಗ್ ನೀಡುತ್ತಿರುವ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಈ ಸೂಚನೆ ನೀಡಿದೆ. ಎರಡು ಸಂಸದೀಯ ಕ್ಷೇತ್ರಗಳನ್ನು ಒಳಗೊಂಡಿರುವ ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳನ್ನು ಹೊರತುಪಡಿಸಿ, ಎಲ್ಲ ರಾಜ್ಯಗಳು ಜಿಲ್ಲೆಯಿಂದ ಹೊರಗೆ ವರ್ಗಾವಣೆಗೊಂಡ ಅಧಿಕಾರಿಗಳನ್ನು ಅದೇ ಸಂಸದೀಯ ಕ್ಷೇತ್ರದೊಳಗೆ ನಿಯುಕ್ತಿ ಮಾಡದಂತೆ ನೋಡಿಕೊಳ್ಳಬೇಕು ಎಂದು ಆಯೋಗವು ನಿರ್ದೇಶಿಸಿದೆ. ಆಯೋಗದ ವರ್ಗಾವಣೆ ನೀತಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಆಯೋಗದ ಹಿಂದಿನ ಸೂಚನೆಗಳಿಗೆ ಅನುಸಾರವಾಗಿ ಈಗಾಗಲೇ ಜಾರಿಗೊಳಿಸಲಾದ ವರ್ಗಾವಣೆಗಳು ಮತ್ತು ಪೋಸ್ಟಿಂಗ್​ಗಳಿಗೆ ಈ ನಿಯಮವು ಪೂರ್ವಾನ್ವಯವಾಗುತ್ತದೆ ಎಂದು ತಿಳಿಸಿದೆ.

ಇಸಿಐ ನೀತಿಯ ಪ್ರಕಾರ, ತಮ್ಮ ತವರು ಜಿಲ್ಲೆಯಲ್ಲಿ ನಿಯೋಜನೆಗೊಂಡಿರುವ ಅಥವಾ ಸ್ಥಳದಲ್ಲಿ ಮೂರು ವರ್ಷ ಪೂರೈಸಿರುವ ಎಲ್ಲ ಅಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಸೂಚಿಸಲಾಗಿದೆ. ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಆಯೋಗವು ವಿವಿಧ ಅಧಿಕಾರಿಗಳು, ಹಿರಿಯ ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿರುವುದನ್ನು ಸ್ಮರಿಸಬಹುದಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net