ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿ

Lok Sabha constituency ticket aspirant
ಆನಂದ ಇಂಗಳಗಾವಿ
Published on

ಜಮಖಂಡಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ ಎಂದು ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಆನಂದ ಇಂಗಳಗಾಂವಿ ಹೇಳಿದರು.

ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಒಂದು ದಶಕದಿಂದ ಜಿಲ್ಲೆಯಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ, ಪಕ್ಷದ ಏಳಿಗೆಗಾಗಿ ಹಗಲಿರುಳು ಕಾರ್ಯ ಮಾಡುತ್ತಿದ್ದೇನೆ.

ವಿಧಾನ ಪರಿಷತ್ ಹಾಗೂ 2023ರ ವಿಧಾನಸಭೆ ಚುನಾವಣೆಯ ಟಿಕೆಟ್ ಆಕಾಂಕ್ಷಿಯಾಗಿದ್ದೆ. ಆದರೆ ಅನೇಕ ಕಾರಣಗಳಿಂದ ಪಕ್ಷ ಟಿಕೆಟ್ ಕೊಡದಿದ್ದರೂ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಹಗಲಿರುಳು ಕಾರ್ಯ ಮಾಡಿದ್ದೇನೆ.

ಜಿಲ್ಲಾದ್ಯಂತ ಸಂಚರಿಸಿ ಸಂಚರಿಸಿ ಪಕ್ಷ ಬಲ ಪಡಿಸುವ ಕಾರ್ಯವನ್ನು ಪ್ರಾಮಾಣಿಕವಾಗಿ ಮಾಡುತ್ತಿದ್ದೇನೆ. ಈ ಸಾರಿ ಯುವಕರಿಗೆ ಹೆಚ್ಚಿನ ಆದ್ಯತೆ ನೀಡುತ್ತಾರೆಂಬ ವಿಶ್ವಾಸ ಇದೆ ಎಂದರು.

ಪಕ್ಷದ ಕಾರ್ಯಗಳ ಜತೆಗೆ ಸಾಮಾಜಿಕ ಸೇವಾ ಕೆಲಸಗಳಲ್ಲಿ ತೊಡಗಿದ್ದೇನೆ. ನನ್ನ ಕಾರ್ಯ ಚಟುವಟಿಕೆ ಗುರುತಿಸಿ ಟಿಕೆಟ್ ನೀಡಿದರೆ ಯುವಕರಿಗೆ ಪ್ರಾಧಾನ್ಯತೆ ನೀಡಿದಂತಾಗುತ್ತದೆ.

ಒಂದು ವೇಳೆ ಪಕ್ಷ ಬೇರೆಯವರಿಗೆ ಟಿಕೆಟ್ ನೀಡಿದರೂ ಅವರ ಗೆಲುವಿಗೆ ಪ್ರಾಮಾಣಿಕವಾಗಿ ಕಾರ್ಯ ಮಾಡುತ್ತೇನೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net