

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ನಾನು ಅಭ್ಯರ್ಥಿಯಲ್ಲ. ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ತೀರ್ಮಾನ ಮಾಡಿದ್ದೇನೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಮಧು ಮಾದೇಗೌಡ ಅಚ್ಚರಿ ಹೇಳಿಕೆ ನೀಡಿದ್ದಾರೆ.
ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಕಷ್ಟು ಬೇರೆ ಬೇರೆ ವಿಚಾರಗಳಿವೆ, ಅದನ್ನು ಸೂಕ್ತ ಸಂದರ್ಭದಲ್ಲಿ ಮಾತನಾಡುತ್ತೇನೆ. ನಮ್ಮಲ್ಲಿ ಸ್ವಲ್ಪ ಗೊಂದಲಗಳಿದ್ದು, ಅವುಗಳು ನಿವಾರಣೆಯಾಗಬೇಕು. ಬೇರೆಯವರು ಪಕ್ಷಕ್ಕೆ ಬರುವ ಬಗ್ಗೆ ನನಗೆ ಗೊತ್ತಿಲ್ಲ. ಚುನಾವಣೆಗೆ ನಾನು ಅಭ್ಯರ್ಥಿಯಲ್ಲ, ಆದರೆ ಈ ಚುನಾವಣೆಯಲ್ಲಿ ತಟಸ್ಥವಾಗಿರಬೇಕೆಂದು ತೀರ್ಮಾನ. ಅದಕ್ಕೆ ಕಾರಣವನ್ನು ಮುಂದಿನ ದಿನದಲ್ಲಿ ಹೇಳುತ್ತೇನೆಂದು ಕುತೂಹಲ ಮೂಡಿಸಿದ್ದಾರೆ.