ಮಂಡ್ಯದಲ್ಲಿ ಕಾಂಗ್ರೆಸ್ ಗೆಲುವು ಖಚಿತ: ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಸುರೇಶ್ ಕಂಠಿ ವಿಶ್ವಾಸ

Lok Sabha election Congress press conference mandya
Published on

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವೆಂಕಟರಮಣೇಗೌಡ(ಸ್ಟಾರ್ ಚಂದ್ರು) ಅವರ ಗೆಲುವು ಖಚಿತ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷರೂ ಆದ ಕಾಂಗ್ರೆಸ್ ಸಮಿತಿ ವಕ್ತಾರ ಸುರೇಶ್ ಕಂಠಿ ತಿಳಿಸಿದರು.

ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ನಮ್ಮನ್ನು ಕೈ ಹಿಡಿದಿದೆ. ವಿಶೇಷವಾಗಿ ಮಹಿಳಾ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿದ್ದು, ಹಾಗಾಗಿ ವೆಂಕಟರಮಣೇಗೌಡ ಅವರ ಗೆಲುವು ಸಾಧಿಸಲಿದ್ದಾರೆ ಎಂದು ಸೋಮವಾರ ಸುದ್ದಿಗೋಷ್ಠಿ ಹೇಳಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸೇರಿದಂತೆ ಜಿಲ್ಲೆಯ ಎಲ್ಲ ಕಾಂಗ್ರೆಸ್ ಶಾಸಕರು ಉತ್ತಮವಾಗಿ ಕೆಲಸ ಮಾಡಿದ್ದಾರೆ. ಇನ್ನು ಚಲುವರಾಯಸ್ವಾಮಿ ಅವರ ವಿರುದ್ಧ ಡಾ.ಎಚ್.ಎನ್.ರವೀಂದ್ರ ಅವರು ಲಘುವಾಗಿ ಹೇಳಿಕೆ ನೀಡಿರುವುದು ಖಂಡನೀಯ. ಇದೇ ರೀತಿ ಮಾತನಾಡಿದರೆ ಮುಂದೆ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು .

ಮುಖಂಡ ಶಂಕರಲಿಂಗೇಗೌಡ ಮಾತನಾಡಿ, ಕಳೆದ ಲೋಕಸಭಾ ಚುನಾವಣೆಯಲ್ಲಿ ಡಾ.ರವೀಂದ್ರ ಅವರು ಮಂಡ್ಯ ಜಿಲ್ಲೆಯ ಸ್ವಾಭಿಮಾನದ ಪ್ರಶ್ನೆ ಎತ್ತಿ ಮತಯಾಚನೆ ಮಾಡಿದ್ದರು. ಈಗ ಅವರ ಸ್ವಾಭಿಮಾನ ಎಲ್ಲಿ ಹೋಯಿತು ಎಂದು ಪ್ರಶ್ನಿಸಿದರು.

ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಅಧ್ಯಕ್ಷ ಶ್ರೀಧರ್, ಶ್ರೀರಂಗಪಟ್ಟಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದರಾಜು, ಪ್ರಾಣೇಶ್, ಕುಮಾರಸ್ವಾಮಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net