ಮಂಡ್ಯ ಲೋಕಸಭಾ ಚುನಾವಣೆ: ಬಹಿರಂಗವಾಯ್ತು ಗೌಪ್ಯ ಮತದಾನ, ಸಾಮಾಜಿಕ ಜಾಲತಾಣದಲ್ಲಿ ವೈರಲ್....!

Lok Sabha Election Voting Revealed mandya
Published on

ಮಂಡ್ಯ: ಮತಗಟ್ಟೆ ಅಧಿಕಾರಿಗಳ ನಿರ್ಲಕ್ಷೃದಿಂದಾಗಿ ಗೌಪ್ಯವಾಗಿರಬೇಕಿದ್ದ ಲೋಕಸಭಾ ಚುನಾವಣೆಯ ಮತದಾನದ ಮಾಹಿತಿ ಬಹಿರಂಗಗೊಳ್ಳುವಂತಾಗಿದೆ. ಜಿಲ್ಲೆಯಲ್ಲಿ ಹಲವು ಪ್ರಕರಣದಲ್ಲಿ ಗೌಪ್ಯ ಮತದಾನ ಬಹಿರಂಗವಾಗಿದಲ್ಲದೆ, ಅದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಪರಿಣಾಮ ಸಕತ್ ವೈರಲ್ ಆಗಿದೆ. ಇದರಿಂದ ಚುನಾವಣಾಧಿಕಾರಿಗಳ ಕಾರ್ಯವೈಖರಿ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ ನಡೆಯುತ್ತಿದೆ.

ಮತಗಟ್ಟೆಯೊಳಗೆ ಮೊಬೈಲ್, ಕ್ಯಾಮರಾ ತೆಗೆದುಕೊಂಡು ಹೋಗಿ ಮತದಾನ ಮಾಡುವ ದೃಶ್ಯ ಸೆರೆ ಹಿಡಿಯಬಾರದೆಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚಿಸಿದೆ. ಅದರಂತೆ, ಜಿಲ್ಲಾಡಳಿತವೂ ಈ ಬಗ್ಗೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ಕೊಟ್ಟಿತ್ತು. ಆದಾಗ್ಯೂ, ಅಧಿಕಾರಿಗಳು ಮಾತ್ರ ತಮ್ಮ ಕರ್ತವ್ಯ ನಿರ್ವಹಿಸುವಲ್ಲಿ ವಿಫಲರಾದರು. ಗಮನಿಸಬೇಕಾದ ಅಂಶವೆಂದರೆ ವೈರಲ್ ಆಗಿರುವ ವಿಡಿಯೋದಲ್ಲಿ ಬಹುತೇಕ ಎಚ್‌ಡಿಕೆ ಪರ ಮತದಾನ ಮಾಡಿರುವುದು ಕಂಡುಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net