ಲೋಕಸಭಾ ಚುನಾವಣೆ ಬಹಿಷ್ಕಾರ ಎಚ್ಚರಿಕೆ

npk-5
Published on

ನಾಪೋಕ್ಲು: ರಸ್ತೆ ಕಾಮಗಾರಿಯನ್ನು ಕೂಡಲೇ ಆರಂಭಿಸದಿದ್ದರೆ ಮುಂಬರುವ ಲೋಕಸಭಾ ಚುನಾವಣೆ ಮತದಾನ ಬಹಿಷ್ಕರಿಸುವುದಾಗಿ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಮಡಿಕೇರಿ ತಾಲೂಕಿನ ಪೆರಾಜೆ, ಅಲೆಟ್ಟಿ ದೊಡ್ಡಡ್ಕ ,ಕಾಪುಮಲೆ ಕುಂದಲಪಾಡಿ ಹಾಗೂ ಕುಂಬಳಚೇರಿ ಗ್ರಾಮ ವ್ಯಾಪ್ತಿಯ ರಸ್ತೆ ಕಾಮಗಾರಿಗಳನ್ನು ತಕ್ಷಣವೇ ಅನುಷ್ಠಾನಗೊಳಿಸಬೇಕು. ತಪ್ಪಿದಲ್ಲಿ ಮುಂದಿನ ಲೋಕಸಭಾ ಚುನಾವಣಾ ಮತದಾನ ಬಹಿಷ್ಕರಿಸುವುದಾಗಿ ರಾಜ್ಯ ಹೆದ್ದಾರಿ ಮುಖ್ಯ ರಸ್ತೆಯಿಂದ ಆರು ಗ್ರಾಮಗಳಿಗೆ ತೆರಳುವ ರಸ್ತೆ ಎದುರು ಕಾಮಗಾರಿಯ ಮಾಹಿತಿ ಒಳಗೊಂಡ ಬೃಹತ್ ಬ್ಯಾನರ್ ಅಳವಡಿಸಿ ಎಚ್ಚರಿಕೆ ನೀಡಿದ್ದಾರೆ.
ನಬಾರ್ಡ್ ಯೋಜನೆಯಡಿ 2022 -23ನೇ ಸಾಲಿನ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಕಾಮಗಾರಿ ಹಮ್ಮಿಕೊಳ್ಳಬೇಕಾಗಿತ್ತು. ಆದರೆ ಇದುವರೆಗೆ ಕಾಮಗಾರಿ ಆರಂಭಗೊಂಡಿರುವುದಿಲ್ಲ. ತಕ್ಷಣವೇ ರಸ್ತೆ ಕಾಮಗಾರಿ ಆರಂಭಿಸಬೇಕು. ತಪ್ಪಿದಲ್ಲಿ ಲೋಕಸಭಾ ಚುನಾವಣೆಯಲ್ಲಿ ಈ ವ್ಯಾಪ್ತಿಯ ಮತದಾರರು ಮತದಾನ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net