ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಘೋಷಣೆ ಶೀಘ್ರ; ಸಲೀಂ ಅಹ್ಮದ್ ಹೇಳಿಕೆ

296d112f-ab3d-4611-a298-c4bef889d5cd
Published on

ಹಾವೇರಿ: ಜನೇವರಿ ಕೊನೆಯ ವಾರದಲ್ಲಿ ಕಾಂಗ್ರೆಸ್ ಪಕ್ಷದಿಂದ ಲೋಕಸಭೆ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡುತ್ತೇವೆ. ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಕೆಪಿಸಿಸಿ ಅಧ್ಯಕ್ಷರ ಕೈ ಸೇರಿದೆ. ಹೈಕಮಾಂಡ್ ಸೂಚಿಸಿದರೆ ಶಾಸಕರು, ಸಚಿವರು ಸಹ ಅಭ್ಯರ್ಥಿ ಆಗುತ್ತಾರೆ ಎಂದು ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಹಾಗೂ ಜೆಡಿಎಸ್‌ನ ಕೆಲ ಶಾಸಕರು ಶೀಘ್ರದಲ್ಲಿಯೆ ಕಾಂಗ್ರೆಸ್ ಪಕ್ಷ ಸೇರ್ಪಡೆ ಆಗಲಿದ್ದಾರೆ. ಸಂಸತ್ ಸದಸ್ಯರನ್ನು ಅಮಾನತು ಮಾಡಿದ್ದು ಪ್ರಜಾಪ್ರಭುತ್ವಕ್ಕೆ ಮಾರಕ, ಕೊಡಲಿ ಪೆಟ್ಟು ಕೊಟ್ಟಂತಾಗಿದೆ.
ಇದೊಂದು ಹಿಟ್ಲರ್ ಆಡಳಿತವಾಗಿದೆ. ಮೋದಿಯವರು ಮೊದಲು ಸಂಸತ್ ರಕ್ಷಣೆ ಮಾಡಲಿ. ತಮ್ಮ ಬಣ್ಣ ಬಯಲಾಗುತ್ತದೆ ಎಂದುಕೊಂಡು ಸಂಸದರನ್ನು ಅಮಾನತು ಮಾಡಿದ್ದಾರೆ. ಇದು ದುರದೃಷ್ಟಕರ ಸಂಗತಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net