ಲೋಕಸಭಾ ಚುನಾವಣೆ: ಮೈಸೂರು ಹೋಟೆಲ್ ಕಾರ್ಮಿಕರಿಗೆ ವೇತನ ಸಹಿತ ರಜೆ

narayana gowda
Published on

ಮೈಸೂರು: ಲೋಕಸಭಾ ಚುನಾವಣೆಯಲ್ಲಿ ಮತದಾನ ಮಾಡಲು ಹೋಟೆಲ್ ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲಾಗಿದೆ ಎಂದು ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷ ನಾರಾಯಣ ಗೌಡ ತಿಳಿಸಿದ್ದಾರೆ.

ಹೋಟೆಲ್, ಬೇಕರಿ, ಸ್ವೀಟ್ಸ್, ವಸತಿ ಗೃಹಗಳು ಹಾಗೂ ಇನ್ನಿತರೆ ಆತಿಥ್ಯ ನೀಡುವ ಉದ್ಯಮಗಳ ಮಾಲೀಕರು ಕಾರ್ಮಿಕರಿಗೆ ವೇತನ ಸಹಿತ ರಜೆ ನೀಡಲು ಸಮ್ಮತಿಸಿದ್ದಾರೆ. ಜಿಲ್ಲೆಯಲ್ಲಿ ನಮ್ಮ ಸಂಘದ ವ್ಯಾಪ್ತಿಯ ಉದ್ಯಮದಲ್ಲಿ 25 ಸಾವಿರ ನೌಕರರು ಇದ್ದು, ಎಲ್ಲರು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net