ಲೋಕಸಭೆ ಚುನಾವಣೆಗೆ ಕಾರ್ಯಕರ್ತರು ಸಿದ್ಧರಾಗಲಿ

05Manju7
ಬೆಳಗಾವಿ ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಎಸ್‌ಸಿ ವಿಭಾಗದ ಸಭೆಯಲ್ಲಿ ವಿನಯ ನಾವಲಗಟ್ಟಿ ಮಾತನಾಡಿದರು. ಅನಂತಕುಮಾರ ಬ್ಯಾಕೋಡ, ಲಕ್ಷ್ಮೀ ನಾಗಣ್ಣವರ, ರಮೇಶ ರಜಪೂತ, ಹನಮಂತ ಭಜಂತ್ರಿ, ಪರಶುರಾಮ ಕಾಂಬಳೆ ಇತರರಿದ್ದರು.
Published on

ಬೆಳಗಾವಿ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿ, ಚಿಕ್ಕೋಡಿ ಕ್ಷೇತ್ರದಿಂದ ಪಕ್ಷದ ಅಭ್ಯರ್ಥಿ ಗೆಲ್ಲಿಸಲು ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಕಾಂಗ್ರೆಸ್ ಗ್ರಾಮೀಣ ಜಿಲ್ಲಾಧ್ಯಕ್ಷ ವಿನಯ ನಾವಲಗಟ್ಟಿ ಹೇಳಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎಸ್‌ಸಿ ವಿಭಾಗದ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈಗಾಗಲೇ ವಿಧಾನ ಸಭೆಯ ಸೆಮಿೈನಲ್ ಗೆದ್ದಿದ್ದೇವೆ. ಈಗ ಲೋಕಸಭೆಯ ೈನಲ್‌ನಲ್ಲಿ ಗೆಲ್ಲಲು ಸಿದ್ಧರಾಗಬೇಕು. ವಿಧಾನಸಭೆ ಚುನಾವಣೆಯಲ್ಲಿ ಅಭ್ಯರ್ಥಿಗಳ ಗೆಲುವಿಗಾಗಿ ಸಂಘಟಿತ ಹೋರಾಟದಂತೆ ಲೋಕಸಭೆ ಚುನಾವಣೆ ಯಲ್ಲೂ ಶ್ರಮಿಸಬೇಕು ಎಂದರು.

ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಪಕ್ಷ ಸಂಘಟನೆಗಾಗಿ ನಿರಂತರವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಓಡಾಡುತ್ತಿದ್ದಾರೆ. ಪಕ್ಷದ ಪ್ರತಿ ಚಟುವಟಿಕೆಗಳನ್ನು ಬೆಂಬಲಿಸುತ್ತಿದ್ದಾರೆ. ನಾವು ಅವರ ಮಾರ್ಗದರ್ಶನದಲ್ಲೇ ಬೆಳಗಾವಿ, ಚಿಕ್ಕೋಡಿ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಬಾವುಟ ಹಾರಿಸಲು ಶ್ರಮಿಸಬೇಕು ಎಂದರು. ಕಾಂಗ್ರೆಸ್ ಪರಿಶಿಷ್ಟ ಜಾತಿ ಜಿಲ್ಲಾ ವಿಭಾಗದ ಅಧ್ಯಕ್ಷ ಅನಂತಕುಮಾರ ಬ್ಯಾಕೋಡ, ಉಪಾಧ್ಯಕ್ಷೆ ಲಕ್ಷ್ಮೀ ನಾಗಣ್ಣವರ, ರಮೇಶ ರಜಪೂತ, ಹನಮಂತ ಭಜಂತ್ರಿ, ಪರಶುರಾಮ ಕಾಂಬಳೆ, ರುದ್ರಪ್ಪ ಮುಂದಿನಮನಿ, ಮಹೇಶ ಕಾಂಬಳೆ, ಲಕ್ಷ್ಮಣ ಮಾದರ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net