

ಉಡುಪಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ನಿರ್ದೆಶನದ ಮೇರೆಗೆ ಶನಿವಾರ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್ ಅದಾಲತನ್ನು ಆಯೋಜಿಸಲಾಗಿದ್ದು, ಒಂದೇ ದಿನ ಒಟ್ಟು 32930 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ.
ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -62, ಚೆಕ್ಕು ಅಮಾನ್ಯ ಪ್ರಕರಣ-294, ಬ್ಯಾಂಕ್, ಹಣ ವಸೂಲಾತಿ ಪ್ರಕರಣ-14, ಎಂ.ವಿ.ಸಿ ಪ್ರಕರಣ-166, ವೈವಾಹಿಕ ಪ್ರಕರಣ-5, ಸಿವಿಲ್ ಪ್ರಕರಣ-211, ಇತರೇ ಕ್ರಿಮಿನಲ್ ಪ್ರಕರಣ-3630 ಹಾಗೂ ವ್ಯಾಜ್ಯ ಪೂರ್ವ ದಾವೆ-28548 ರಾಜೀ ಮುಖಾಂತರ ಇತ್ಯರ್ಥಪಡಿಸಿ, ರೂ.19,51,12,983 ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.