ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

IMG-20231030-WA0005
Published on

ಕಲಬುರಗಿ: ನಗರದಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಇಬ್ಬರು ಸರ್ಕಾರಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಬೀದರ್ ನ ವಲಯ ಅರಣ್ಯಾಧಿಕಾರಿ ಬಸವರಾಜ ಡಾಂಗೆ ಅವರ ನಗರದ ಸಂತೋಷ ಕಾಲನಿಯ ಮಾಕಾ ಲೇಔಟ್ ನಲ್ಲಿನ ಮನೆ ಮತ್ತು ಕೆಬಿಜಿಎನ್ ಎಲ್ ನ ಎಕ್ಸಿಕ್ಯೂಟೀವ್ ಇಂಜಿನಿಯರ್ ತಿಪ್ಪಣ್ಣಗೌಡ ಸೋಮಣ್ಣಗೌಡ ಅವರ ಭಾಗ್ಯವಂತಿ ನಗರದಲ್ಲಿನ ಮನೆ ಮೇಲೆ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್ ಪಿ ಕರ್ನೂಲ್, ಡಿವೈಎಸ್ಪಿ ಮಂಜುನಾಥ್ ಗಂಗಲ್ ನೇತೃತ್ವದಲ್ಲಿ ದಾಳಿ ಮಾಡಿದ್ದು, ಮನೆಯಲ್ಲಿನ್ನು ಪರಿಶೀಲನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net