ಮಾ.8 ಕ್ಕೆ ಲೋಕ ಅದಾಲತ್, ರಾಜೀ ಸಂಧಾನದಲ್ಲಿ ಪ್ರಕರಣ ಇತ್ಯರ್ಥಕ್ಕೆ ಅವಕಾಶ

Press-Meet-1-1.jpeg
Published on

ಚಿಕ್ಕಬಳ್ಳಾಪುರ: ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸುವ ರಾಷ್ಟ್ರೀಯ ಲೋಕ್ ಅದಾಲತ್‌ಗಳನ್ನು ಮಾ.೮ ರಂದು ಕೈಗೊಳ್ಳಲಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ವಿವಿಧ ಹಂತದ ನ್ಯಾಯಾಲಯಗಳಲ್ಲಿ ಬಾಕಿ ಇದ್ದು ರಾಜಿಯಾಗಬಲ್ಲ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಕ್ಷಿದಾರರ ಸಮ್ಮುಖದಲ್ಲಿ ಅದಾಲತ್ ನಲ್ಲಿ ಇತ್ಯರ್ಥ ಪಡಿಸಲಾಗುತ್ತಿದ್ದು ಇದನ್ನು ಸದ್ಬಳಸಿಕೊಳ್ಳಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ನೇರಳೆ ವೀರಭದ್ರಯ್ಯ ಭವಾನಿ ಮನವಿ ಮಾಡಿದ್ದಾರೆ.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಮೂಲಕ ನಿರಂತರವಾಗಿ ರಾಜಿ ಪಂಚಾಯಿತಿ ಮೂಲಕ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯಗಳಲ್ಲಿ ಬಾಕಿ ಇರುವ  ರಾಜಿಯಾಗಬಲ್ಲ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದ್ದಾರೆ.  
ನ್ಯಾಯಾಲಯಗಳಲ್ಲಿನ ಪ್ರಕರಣಗಳನ್ನು ಕಕ್ಷಿದಾರರು ರಾಜಿ ಮಾಡಿಕೊಳ್ಳಲು ಸೂಕ್ತ ಕಾನೂನು ಸಲಹೆ ಮತ್ತು ಮಾರ್ಗದರ್ಶನವನ್ನು ನೀಡಲಾಗುತ್ತದೆ. ಪರಸ್ಪರ ಒಪ್ಪಿಗೆ ಇತ್ಯರ್ಥದ ತೀರ್ಮಾನದಿಂದ ವಿವಾದವು ಸುಖಾಂತ್ಯಗೊಳ್ಳುತ್ತದೆ. ಹಣ, ಸಮಯ ಉಳಿತಾಯವಾಗುತ್ತದೆ. ಹಾಗೆಯೇ ಕದಾರರ ನಡುವೆ ಉತ್ತಮ ಬಾಂಧವ್ಯ ಬೆಳೆಯುತ್ತದೆ. ಇನ್ನು ಪ್ರಕರಣದ ಬಳಿಕ ನ್ಯಾಯಾಲಯ ಶುಲ್ಕವನ್ನು ಸಂರ್ಪೂವಾಗಿ ಮರುಪಾವತಿ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಅದಾಲತ್ ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ, ಉದ್ಯೋಗದಲ್ಲಿ ಪುನರ್ ಸ್ಥಾಪನೆ, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬAಧಿಸಿದ ಕ್ಲೇಮುಗಳು, ಜಿಲ್ಲಾ ಗ್ರಾಹಕರ ಪರಿಹಾರ ಆಯೋಗದಲ್ಲಿನ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಪ್ರಕರಣಗಳು, ವಿಚ್ಛೇಧನವನ್ನು ಹೊರತುಪಡಿಸಿ ವೈವಾಹಿಕ ಕುಟುಂಬ ನ್ಯಾಯಾಲಯದ ಪ್ರಕರಣಗಳು, ಚೆಕ್ಕು ಅಮಾನ್ಯ, ಸಾಲ ವಸೂಲಾತಿ ನ್ಯಾಯಾಧಿಕರಣದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಕಾರ್ಮಿಕರ ವಿವಾದಗಳು, ಭೂಮಿ ಸ್ವಾಧಿನ ಪ್ರಕರಣಗಳು ಹಾಗೂ ವೇತನ ಮತ್ತು ಭತ್ಯೆಗಳಿಗೆ ಸಂಬAಧಿಸಿದ ಸೇವಾ ಪ್ರಕರಣಗಳು ಹಾಗೂ ಸಿವಿಲ್ ಪಿಂಚಣಿ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಲಾಗುತ್ತದೆ. ಕದಾರರು ಮುಂಚಿತವಾಗಿ ಸಂಬAಧಪಟ್ಟ ಜಿಲ್ಲಾ ಹಾಗೂ ತಾಲೂಕು ಕಾನೂನು ಸೇವೆಗಳ ಪ್ರಾಧಿಕಾರದ ಮಾಹಿತಿ ಪಡೆದುಕೊಳ್ಳಬಹುದಾಗಿದೆ.  

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net