

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
ಜಿಲ್ಲೆಯ ಸೈನಿಕರು, ಮಾಜಿ ಸೈನಿಕರು, ಸ್ವಾತಂತ್ರ್ಯ ಹೋರಾಟಗಾರಿಗೆ ಹಾಗೂ ಅವಲಂಬಿತ ಕುಟುಂಬಗಳಿಗೆ ಸರ್ಕಾರದಿಂದ ಸಿಗಬೇಕಾದ ಸೌಲಭ್ಯಗಳನ್ನು ಒದಗಿಸಲು ವಿಳಂಬ ಧೋರಣೆ ಕಂಡುಬಂದ ಹಿನ್ನೆಲೆಯಲ್ಲಿ ಜಿಲ್ಲೆಯ ಉಪವಿಭಾಗಾಧಿಕಾರಿ ಹಾಗೂ ನಾಲ್ಕೂ ತಾಲೂಕುಗಳ ತಹಸೀಲ್ದಾರ್‌ಗಳ ಮೇಲೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಸ್ವಯಂ ಪ್ರೇರಿತ ದೂರು ದಾಖಲಾಗಿದೆ.
ಉಪವಿಭಾಗಾಧಿಕಾರಿ ದುರ್ಗಶ್ರೀ, ದೇವನಹಳ್ಳಿ ತಹಸೀಲ್ದಾರ್ ಎಂ.ಅನಿಲ್, ಹೊಸಕೋಟೆ ತಹಸೀಲ್ದಾರ್ ಕೆ.ಎಸ್,ಸೋಮಶೇಖರ್, ದೊಡ್ಡಬಳ್ಳಾಪುರ ತಹಸೀಲ್ದಾರ್ ವಿದ್ಯಾವಿಭಾ ರಾಥೋಡ್ ಹಾಗೂ ನೆಲಮಂಗಲ ತಹಸೀಲ್ದಾಋ ವಿ.ಎಸ್.ಶೀಥಲ್ ವಿರುದ್ಧ ಪ್ರಕರಣ ದಾಖಲಾಗಿದೆ.
ಕರ್ತವ್ಯಲೋಪ ಆರೋಪ:
ಜಿಲ್ಲೆಯಲ್ಲಿ ನಿವೃತ್ತರಾದ ಯೋಧರಿಗೆ ಹಾಗೂ ಹುತಾತ್ಮ ಯೋಧರ ಅವಲಂಬಿತರಿಗೆ ಹಾಗೂ ಸ್ವಾತಂತ್ರ್ಯ ಹೋರಾಟಗಾರರಿಗೆ ಹಾಗೂ ಅವರ ಅವಲಂಬಿತರಿಗೆ ನಿಯಮಾನುಸಾರ ಸರ್ಕಾರದಿಂದ ದೊರೆಯಬೇಕಾದ ನಿವೇಶನವನ್ನು ನಿಗದಿತ ಸಮಯದಲ್ಲಿ ನೀಡದೆ ಸರ್ಕಾರಿ, ಸಾರ್ವಜನಿಕ ನೌಕರ ಸಿಬ್ಬಂದಿ ಹಾಗೂ ಅಧಿಕಾರಿಗಳು ಭ್ರಷ್ಟಾಚಾರ ನಡೆಸುತ್ತಿರುವುದು ಹಾಗೂ ಕರ್ತವ್ಯಲೋಪ ಎಸಗುತ್ತಿರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ದೂರಿನಲ್ಲಿ ಸಾರ್ವಜನಿಕ ಹಿತಾಸಕ್ತಿ ಇರುವುದರಿಂದ ಈ ಬಗ್ಗೆ ಕೂಲಂಕುಷವಾದ ತನಿಖೆಯ ಅವಶ್ಯಕತೆ ಇದೆ ಎಂದು ಲೋಕಾಯುಕ್ತ ಸಂಸ್ಥೆ ತಿಳಿಸಿದೆ.