ಕೊಳ್ಳೇಗಾಲದಲ್ಲಿ ಲೋಕಾಯುಕ್ತ ದಾಳಿ

ಪಟ್ಟಣದ ಕ್ರೈಸ್ತ ಬೀದಿಯಲ್ಲಿರುವ ಮನೆಯೊಂದಕ್ಕ್ೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳ್ಿ ನಡೆಸಿ ಪರಿಶೀಲನೆ ನಡೆಸಿದರು.
ಪಟ್ಟಣದ ಕ್ರೈಸ್ತ ಬೀದಿಯಲ್ಲಿರುವ ಮನೆಯೊಂದಕ್ಕ್ೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳ್ಿ ನಡೆಸಿ ಪರಿಶೀಲನೆ ನಡೆಸಿದರು.
Published on

ಕೊಳ್ಳೇಗಾಲ: ಪಟ್ಟಣದ ಕ್ರೈಸ್ತ ಬೀದಿಯಲ್ಲಿರುವ ಮನೆಯೊಂದರ ಮೇಲೆ ಶುಕ್ರವಾರ ಲೋಕಾಯುಕ್ತ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಬೆಂಗಳೂರಿನಲ್ಲಿ ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತರಾಗಿ ಕಾರ್ಯ ನಿರ್ವಹಿಸುತ್ತಿರುವ ರಮೇಶ್ ಕುಮಾರ್ ಅವರ ಸಹೋದರಿ ಸುಧಾ ಪುಟ್ಟಸ್ವಾಮಿ ಅವರ ಮನೆಯ ಮೇಲೆ ದಾಳಿ ನಡೆದಿದ್ದು, ಬೆಳಗ್ಗೆ 6 ರಿಂದ ಸಂಜೆ 5 ಗಂಟೆವರೆಗೆ ಲೋಕಾಯುಕ್ತ ಅಧಿಕಾರಿಗಳು ಶೋಧ ನಡೆಸಿದ್ದಾರೆ.

ಈ ವೇಳೆ ಕೆಲವು ದಾಖಲಾತಿಗಳನ್ನು ವಶಪಡಿಸಿಕೊಂಡಿದ್ದಾರೆ. 2 ಕಾರಿನಲ್ಲಿ 8 ಜನ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೆ ಬೆಂಗಳೂರಿನಲ್ಲಿರುವ ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತ ರಮೇಶ್ ಅವರ ವಾಸದ ಮನೆಯಲ್ಲೂ ಶೋಧ ಕಾರ್ಯ ನಡೆದಿದೆ ಎಂದು ತಿಳಿದು ಬಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net