ಜಿಲ್ಲಾಸ್ಪತ್ರೆ ಮೇಲೆ ಲೋಕಾಯುಕ್ತ ದಾಳಿ

Published on

ಬಳ್ಳಾರಿ : ಇಲ್ಲಿನ ಜಿಲ್ಲಾಸ್ಪತ್ರೆ , ಬಿಮ್ಸ್ ಹಾಗೂ ಔಷಧಿ ದಾಸ್ತಾನು ಉಗ್ರಾಣಕ್ಕೆ ಲೋಕಾಯುಕ್ತ ಇಲಾಖೆಯು ಮೂರು ತಂಡಗಳಾಗಿ ಶನಿವಾರ ದಾಳಿ ನಡೆಸಿದೆ.

ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವು ಹಿನ್ನಲೆ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡ ಲೋಕಾಯುಕ್ತ ಅಧಿಕಾರಿಗಳು ಸರ್ಚ್ ವಾರೆಂಟ್ ಸಹಿತ ದಾಳಿಗೆ ಆಗಮಿಸಿದರು. ಎಸ್ಪಿ, ಡಿವೈಎಸ್ಪಿ ಹಾಗೂ ಸಿಪಿಐ ನೇತೃತ್ವದಲ್ಲಿ ಮೂರು ತಂಡಗಳಾಗಿ ನಗರದ ಮೂರು ಕಡೆ ದಾಳಿ ನಡೆಸಿ ಕೆಲ ಔಷಧಿಗಳು ಹಾಗೂ ಅಗತ್ಯ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಲ್ಲದೆ, ಬಾಣಂತಿಯರಿಗೆ ನೀಡಿರುವ ದೋಷಪೂರಿತ ರಿಂಗರ್ ಲ್ಯಾಕ್ಟೇಟ್ ಐವಿ ದ್ರಾವಣ ಹಾಗೂ ಮೆಡಿಕಲ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಲೋಕಾಯುಕ್ತ ಎಸ್ಪಿ ಸಿದ್ದರಾಜು ವಿಜಯವಾಣಿಗೆ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net