ಮೂರು ಕಡೆ ಲೋಕಾಯುಕ್ತ ಅಧಿಕಾರಿಗಳ ದಾಳಿ

Screenshot_2025-05-31-14-09-06-89.jpg
Published on

ಬೆಳಗಾವಿ: ಬೆಳಂಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ಮೂರು ಕಡೆ ದಾಳಿ ನಡೆಸ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಶನಿವಾರ ಬೆಳಿಗ್ಗೆ ಬೆಳಗಾವಿ ಲೋಕಾಯುಕ್ತ ಎಸ್ಪಿ ಹನಮಂತರಾಯ್ ನೇತೃತ್ವದಲ್ಲಿ ದೇವರಾಜ್ ಅರಸು ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಸಿದ್ಧಲಿಂಗಪ್ಪ ಬಾನಸಿ ಅವರ ವಿದ್ಯಾನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ರಾಯಭಾಗ ತಾಲೂಕಿನ ಬೆಕ್ಕೇರಿ ಗ್ರಾಮದಲ್ಲಿರು ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ .

ಧಾರವಾಡದ ಲೋಕೋಪಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ಎಚ್‌.ಸಿ. ಸುರೇಶ ಮನೆ ಮೇಲೂ ದಾಳಿ ಹಾಗೂ ಬೆಳಗಾವಿಯ ಹನುಮಾನ ನಗರದಲ್ಲಿರುವ ಎಚ್‌.ಸಿ. ಸುರೇಶ ಮನೆ ಮೇಲೆ ದಾಳಿಮಾಡಿದು,

ಗದಗದ ನಿರ್ಮಿತಿ ಕೇಂದ್ರದ ಪ್ರೊಜೆಕ್ಟ್ ಡೈರೆಕ್ಟರ್ ಗಂಗಾಧರ ಶಿರೋಳ ಮನೆ ಮೇಲೂ ದಾಳಿ ಮಾಡಿದ್ದಾರೆ. ಬೆಳಗಾವಿ ವಿಭಾಗದ ಲೋಕಾಯುಕ್ತ ವ್ಯಾಪ್ತಿಯ ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net