ಲೋಕಾಯುಕ್ತ ಬಲೆಗೆ ಬಿಇಒ, ಶಿಕ್ಷಕ

Raid
Published on

ಮೈಸೂರು: ಗೌರವಧನ ಬಿಡುಗಡೆ ಮಾಡಲು ವ್ಯಕ್ತಿಯೊಬ್ಬರಿಂದ 5 ಸಾವಿರ ರೂ. ಲಂಚ ಪಡೆಯುತ್ತಿದ್ದ ನಂಜನಗೂಡಿನ ಕ್ಷೇತ್ರ ಶಿಕ್ಷಣಾಧಿಕಾರಿ(ಬಿಇಒ) ಹಾಗೂ ಶಿಕ್ಷಕ ಗುರುವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.


ಬಿಇಒ ಶಿವಲಿಂಗಯ್ಯ ಹಾಗೂ ಶಿಕ್ಷಕ ರಮೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಮೈಸೂರಿನ ತಿಲಕ್‌ನಗರ ನಿವಾಸಿ ನರಸಿಂಹ ಮೂರ್ತಿ ಅವರಿಂದ ನಂಜನಗೂಡಿನ ಬಿಇಒ ಕಚೇರಿಯಲ್ಲೇ ಲಂಚ ಪಡೆಯುತ್ತಿದ್ದ ಸಂದರ್ಭದಲ್ಲೇ ಸಿಕ್ಕಿಬಿದ್ದಿದ್ದಾರೆ.

ಶಿವಲಿಂಗಯ್ಯ ಪರವಾಗಿ ಶಿಕ್ಷಕ ರಮೇಶ್ ಲಂಚದ ಹಣವನ್ನು ಸ್ವೀಕರಿಸಿದ್ದರು. ಲೋಕಾಯುಕ್ತ ಎಸ್‌ಪಿ ವಿ.ಜೆ.ಸಜೀತ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಡಿವೈಎಸ್‌ಪಿ ವಿ.ಕೃಷ್ಣಯ್ಯ, ಇನ್‌ಸ್ಪೆಕ್ಟರ್‌ಗಳಾದ ರವಿಕುಮಾರ್, ಉಮೇಶ್, ಜಯರತ್ನಾ, ಲೋಕಾಯುಕ್ತ ಸಿಬ್ಬಂದಿ ವೀರಭದ್ರ ಸ್ವಾಮಿ, ಗೋಪಿ, ಲೋಕೇಶ್, ಆಶಾ, ಕಾಂತರಾಜು, ಮೋಹನ್, ಪ್ರದೀಪ್, ಮೋಹನ್‌ಗೌಡ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net