ಲೋಕಾಯುಕ್ತ ಪೊಲೀಸರಿಂದ ಕುಂದುಕೊರತೆ ಸಭೆ

13-AUG-GPT-2
Published on

ಗುಂಡ್ಲುಪೇಟೆ: ಲೋಕಾಯುಕ್ತ ಪೊಲೀಸರು ಬುಧವಾರ ಪಟ್ಟಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿದರು.

ಲೋಕಾಯುಕ್ತ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಅಧ್ಯಕ್ಷತೆಯಲ್ಲಿ ಪಟ್ಟಣದ ಅತಿಗಣ್ಯರ ಪ್ರವಾಸಿಮಂದಿರದಲ್ಲಿ ಆಯೋಜಿಸಿದ್ದ ಸಭೆಯಲ್ಲಿ ಕಂದಾಯ ಇಲಾಖೆ, ಪುರಸಭೆ, ಗ್ರಾಮಪಂಚಾಯಿತಿ ಹಾಗೂ ಸೆಸ್ಕ್ ಬಗ್ಗೆ 4 ದೂರುಗಳು ಬಂದಿದ್ದರು.

ಸೆಸ್ಕ್ ಹಾಗೂ ಹಂಗಳ ಗ್ರಾಮಪಂಚಾಯಿತಿಗೆ ಸಂಬಂಧಿಸಿದ ಎರಡು ದೂರುಗಳನ್ನು ಪರಿಶೀಲಿಸಿ ಸ್ಥಳದಲ್ಲಿಯೇ ಪರಿಹರಿಸಲಾಯಿತು. ಇನ್ನೆರಡು ದೂರುಗಳನ್ನು ಕಾಲಮಿತಿಯಲ್ಲಿ ಪರಿಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಭೆಯಲ್ಲಿ ಲೋಕಾಯುಕ್ತ ಸರ್ಕಲ್ ಇನ್‌ಸ್ಪೆಕ್ಟರ್ ಶಶಿಕುಮಾರ್, ಸಿಬ್ಬಂದಿ ಮನೋರಂಜನ್, ಗುರುಪ್ರಸಾದ್ ಹಾಗೂ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net