ಕಾಪು ಮಾರಿಗುಡಿಗೆ ಲೋಕಾಯುಕ್ತ ನ್ಯಾಯಮೂರ್ತಿ ಭೇಟಿ

loka
Published on

ಪಡುಬಿದ್ರಿ: ಕರ್ನಾಟಕ ಸರ್ಕಾರದ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ದಂಪತಿ ಹಾಗೂ ಮಂಗಳೂರು ವಿಭಾಗದ ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಎ.ನಟರಾಜ್ ಗುರುವಾರ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಮಾರಿಯಮ್ಮನ ದರ್ಶನ ಪಡೆದರು.

ದೇವಳ ಪ್ರಧಾನ ಅರ್ಚಕ ಶ್ರೀನಿವಾಸ ತಂತ್ರಿ ಕಲ್ಯಾ ಅವರಿಗೆ ಅನುಗ್ರಹ ಪ್ರಸಾದ ನೀಡಿದರು. ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ವಿ.ಶೆಟ್ಟಿ ಜೀರ್ಣೋದ್ಧಾರ ಕಾರ್ಯಗಳ ಬಗ್ಗೆ ಮಾಹಿತಿ ನೀಡಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ರತ್ನಾಕರ ಶೆಟ್ಟಿ ನಡಿಕೆರೆ, ತಹಸೀಲ್ದಾರ್ ಪ್ರತಿಭಾ ಆರ್., ಕಾರ್ಯನಿರ್ವಹಣಾಧಿಕಾರಿ ರವಿಕಿರಣ್, ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯಾ, ವ್ಯವಸ್ಥಾಪನಾ ಸಮಿತಿ ಮಾಜಿ ಸದಸ್ಯ ಚಂದ್ರಶೇಖರ್ ಅಮೀನ್, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಕಚೇರಿ ನಿರ್ವಾಹಕ ಜಯರಾಮ್ ಆಚಾರ್ಯ, ಪ್ರಬಂಧಕ ಗೋವರ್ಧನ್ ಸೇರಿಗಾರ್ ಮತ್ತಿತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net