

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ಲೋಕಾಯುಕ್ತ ಪೊಲೀಸ್ ಇಲಾಖೆ ಅಽಕಾರಿಗಳು ಜು. 28ರಂದು ಬೆಳಗ್ಗೆ 11ರಿಂದ ಮಧ್ಯಾಹ್ನ 2ರವರೆಗೆ ಅಣ್ಣಿಗೇರಿ ಪುರಸಭೆ ಸಭಾಭವನದಲ್ಲಿ ಸಾರ್ವಜನಿಕರಿಂದ ದೂರು, ಅಹವಾಲು ಸ್ವೀಕರಿಸಲಿದ್ದಾರೆ. ಸರ್ಕಾರಿ ಅಽಕಾರಿ, ನೌಕರರು ಸರ್ಕಾರಿ ಸೇವೆ ಒದಗಿಸುವಲ್ಲಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರೆ, ಅನವಶ್ಯಕ ವಿಳಂಬ ಮಾಡುತ್ತಿದ್ದರೆ, ಸರ್ಕಾರಿ ಭೂಮಿ ಒತ್ತುವರಿಯಾಗಿದ್ದರೆ, ಕಾಮಗಾರಿಗಳಲ್ಲಿ ಅಕ್ರಮ ಅಥವಾ ಕಳಪೆಯಾಗಿದ್ದರೆ ದೂರು ನೀಡಬಹುದು ಎಂದು ಲೋಕಾಯುಕ್ತ ಪೊಲೀಸ್ ಪ್ರಕಟಣೆ ತಿಳಿಸಿದೆ.