

ಮಂಡ್ಯ: ನಗರದ ತಾಲೂಕು ಕಚೇರಿ ಆವರಣದಲ್ಲಿ ಆ.9ರಂದು ಲೋಕಾಯುಕ್ತ ಪೊಲೀಸ್ ಘಟಕದ ಅಧಿಕಾರಿಗಳು ಸಾರ್ವಜನಿಕರಿಂದ ದೂರು ಸ್ವೀಕಾರ ಮಾಡಲಿದ್ದಾರೆ.
ಸರ್ಕಾರಿ ಮತ್ತು ಅರೆಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡುತ್ತಿದ್ದರೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು/ಅಹವಾಲುಗಳಿದ್ದರೆ ಅಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 2.30ರವರೆಗೆ ಸಲ್ಲಿಸಬಹುದೆಂದು ಪ್ರಕಟಣೆ ತಿಳಿಸಿದೆ.