ಲಂಚ ಸ್ವೀಕರಿಸುತ್ತಿದ್ದ ವೈದ್ಯ ಹಾಗೂ ಆಶಾ ಕಾರ್ಯಕರ್ತೆ ಲೋಕಾ ಬಲೆಗೆ

Loka
Published on

ಹಾವೇರಿ: ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಲು ಲಂಚ ಸ್ವೀಕರಿಸುತ್ತಿದ್ದ ವೈದ್ಯ ಹಾಗೂ ಆಶಾ ಕಾರ್ಯಕರ್ತೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಜಿಲ್ಲಾಸ್ಪತ್ರೆ ವೈದ್ಯ ಡಾ.ಉಮೇಶ ಎಂ ಕೆಳಗಿನಮನಿ ಹಾಗೂ ಆಶಾ ಕಾರ್ಯಕರ್ತೆ ದ್ರಾಕ್ಷಾಯಣಿ ಪಿ ಚಿಕ್ಕನಂದಿ ಬಂಧನಕ್ಕೊಳಗಾದವರು.

ವಿಜಯಲಕ್ಷ್ಮಿ ಹಾಗೂ ಸಹೋದರಿ ಲಕ್ಷ್ಮೀ ಎಂಬುವರ ಸಂತಾನಹರಣ ಚಿಕಿತ್ಸೆಗೆ 2,000 ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net