

ಮಂಡ್ಯ: ಲೋಕಾಯುಕ್ತ ಪೊಲೀಸ್ ವಿಭಾಗದ ಅಧಿಕಾರಿಗಳು ಆ.21ರಂದು ಮಳವಳ್ಳಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರ ಕುಂದು ಕೊರತೆ ಆಲಿಸಲಿದ್ದಾರೆ.
ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ನೌಕರರು ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡುತ್ತಿದ್ದರೆ ಹಾಗೂ ಭ್ರಷ್ಟಾಚಾರದ ಬಗ್ಗೆ ಅಂದು ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 1.30ರವರೆಗೆ ಸಾರ್ವಜನಿಕರು ದೂರು ಸಲ್ಲಿಸಬಹುದು ಎಂದು ಪ್ರಕಟಣೆ ತಿಳಿಸಿದೆ.