ಲೋಕಾಯುಕ್ತ ಅಹವಾಲು ಸ್ವೀಕಾರ 11 ರಂದು

Published on


ಕಲಬುರಗಿ: ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸೆ.೧೧ರಂದು ಬೆಳಗ್ಗೆ ೧೧ರಿಂದ ಮಧ್ಯಾಹ್ನ ೧.೩೦ರವರೆಗೆ ಸೇಡಂ ತಹಸೀಲ್ದಾರ್ ಕಚೇರಿಯಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ ಎಂದು ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಉಮೇಶ ಬಿ.ಕೆ. ತಿಳಿಸಿದ್ದಾರೆ. ಲೋಕಾಯುಕ್ತ ಡಿಎಸ್‌ಪಿ ಗೀತಾ ಬೇನಹಾಳ (೯೩೬೪೦೬೨೫೬೯) ಹಾಗೂ ಪೊಲೀಸ್ ನಿರೀಕ್ಷಕ ರಾಜಶೇಖರ ಹಳಗೋದಿ (೯೩೬೪೦೬೨೬೭೧) ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಕೆಲಸ ವಿಳಂಬ ಮಾಡುತ್ತಿದ್ದಾರೆ. ಕಾರಣ ಇಲ್ಲದೆ ಅರ್ಜಿ ತಿರಸ್ಕರಿಸುತ್ತಿದ್ದರೆ, ಕಚೇರಿಗೆ ಅಲೆದಾಡಿಸುತ್ತಿದ್ದರೆ, ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡಿಕೊಡಲು ಲಂಚ ಕೇಳಿದ್ದರೆ ಕರ್ನಾಟಕ ಲೋಕಾಯುಕ್ತರ ಗಮನಕ್ಕೆ ತರಬಹುದಾಗಿದೆ. ಮಾಹಿತಿಗೆ ಪೊಲೀಸ್ ಅಧೀಕ್ಷಕರು, ಕರ್ನಾಟಕ ಲೋಕಾಯುಕ್ತ ಕಚೇರಿ, ಐವಾನ್ ಶಾಹಿ, ಕಂಪೌAಡ್ ಕಚೇರಿಯನ್ನು ಹಾಗೂ ೦೮೪೭೨-೨೯೫೩೬೪ಗೆ ಸಂಪರ್ಕಿಸಲು ಕೋರಿದ್ದಾರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net