ಫೆ.12 ರಂದು ಲೋಕಾಯುಕ್ತ ಜನಸಂಪರ್ಕ ಸಭೆ

Published on

ಮಂಗಳೂರು : ಸುಳ್ಯ ತಾಲೂಕು ಕಚೇರಿಯಲ್ಲಿ ಲೋಕಾಯುಕ್ತ ಜನಸಂಪರ್ಕ ಸಭೆ ೆ.12 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆಯಲಿದೆ. ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಮಧ್ಯಾಹ್ನ 2 ಗಂಟೆಯಿಂದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮ ಪಂಚಾಯಿತಿಗೆ ಭೇಟಿ ಮಾಡಲಿದ್ದಾರೆ.

ಉಳಿದ ದಿನಗಳಲ್ಲೂ ಕಚೇರಿ ವೇಳೆಯಲ್ಲಿ ಸಹ ಸಾರ್ವಜನಿಕರು ತಮ್ಮ ಅಹವಾಲು, ದೂರುಗಳನ್ನು ನೀಡಬಹುದಾಗಿದೆ ಅಥವಾ ದೂರವಾಣಿ ಮೂಲಕವೂ ಸಂಪರ್ಕಿಸಬಹುದಾಗಿದೆ. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯುವಂತೆ ಕೋರಲಾಗಿದೆ. ಸಂಪರ್ಕಿಸಬಹುದಾದ ದೂರವಾಣಿ ಸಂಖ್ಯೆಗಳು: ಪೊಲೀಸ್ ಅಧೀಕ್ಷಕರ ಕಚೇರಿ 0824 2950997, 9364062517, ಪೊಲೀಸ್ ಉಪಾಧೀಕ್ಷಕರು-1 ಕಚೇರಿ 0824 2453420, 9364062579, ಪೊಲೀಸ್ ಉಪಾಧೀಕ್ಷಕರು-2 ಕಛೇರಿ 0824-2453420, 9364062580. ಅರ್ಜಿದಾರರು ನಮೂನೆ 1 ಹಾಗೂ 2 ರಲ್ಲಿ ಭರ್ತಿ ಮಾಡಿ ಅಫಿದಾವಿತ್ ಮಾಡಿ ಸಲ್ಲಿಸಿದ ಅರ್ಜಿಗಳನ್ನು ಈ ಕಚೇರಿಗೆ ಅಥವಾ ನೇರವಾಗಿ ಮಾನ್ಯ ನಿಬಂಧಕರು, ಕರ್ನಾಟಕ ಲೋಕಾಯುಕ್ತ, ಬಹುಮಹಡಿಗಳ ಕಟ್ಟಡ, ಡಾ/ಬಿ.ಆರ್. ಅಂಬೇಡ್ಕರ್ ವೀಧಿ, ಬೆಂಗಳೂರು-560001 ಅವರಿಗೆ ಸಲ್ಲಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net