ಆರ್‌ಟಿಒ ಚೆಕ್ ಪೋಸ್ಟ್ ಮೇಲೆ ಲೋಕಾಯುಕ್ತ ದಾಳಿ

IMG-20220930-WA0049.jpg
Published on

ಹೊಸಪೇಟೆ: ಲೋಕಾಯುಕ್ತ ಪೊಲೀಸರು ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯಲ್ಲಿ ಏಕಕಾಲಕ್ಕೆ ಸಾರಿಗೆ ಇಲಾಖೆ ಚೆಕ್ ಪೋಸ್ಟ್ ಮೇಲೆ ಶುಕ್ರವಾರ ಬೆಳಗಿನಜಾವ ದಾಳಿ ನಡೆಸಿ, ಬಿಸಿ ಮುಟ್ಟಿಸಿದ್ದಾರೆ.
ಚೆಕ್ ಪೋಸ್ಟ್‌ಗಳಲ್ಲಿ ತಪಾಸಣೆ ನೆಪದಲ್ಲಿ ಸರಕು ಸಾಗಾಣೆಯ ಭಾರೀ ವಾಹನಗಳು ಮತ್ತು ಇತರೆ ವಾಹನ ಚಾಲಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದ ಹಿನ್ನೆಲೆಯಲ್ಲಿ ದಾಳಿ ನಡೆದಿದೆ.
ವಿಜಯನಗರ ಜಿಲ್ಲೆ ಹೊಸಪೇಟೆ ನಗರದ ಹೊರವಲಯದ ಶನೇಶ್ವರ ದೇವಾಲಯ ಸಮೀಪದ ವಾಹನ ತಪಾಸಣಾ ಕೇಂದ್ರಕ್ಕೆ ದಾಳಿ ನಡೆಸಿದರು. ಲೋಕಾಯುಕ್ತ ಡಿಎಸ್ಪಿ ಅಯ್ಯನಗೌಡ ನೇತೃತ್ವದಲ್ಲಿ ಸಿಬ್ಬಂದಿ ದಾಳಿ ನಡೆಸಿದ್ದರು. ಈ‌ ವೇಳೆ ಚೆಕ್‌ನಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

ಅದರಂತೆ ಕರ್ನಾಟಕ ಮತ್ತು ಆಂಧ್ರ ಪ್ರದೇಶದ ಗಡಿಯಲ್ಲಿರುವ ಬಳ್ಳಾರಿ ಜಿಲ್ಲೆಯ ಹಗರಿ ನದಿ ಚೆಕ್ ಪೋಸ್ಟ್ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಲೋಕಾಯುಕ್ತ ಮೇಲೆ ದಾಳಿ ನಡೆದಿದ್ದರ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಆರ್‌ಟಿಒ ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಒಗದಿಸಿದ್ದಾರೆ ಎನ್ನಲಾಗಿದೆ. ಅಂತಾರಾಜ್ಯ ವಾಹನಗಳ ದಾಖಲೆ ಪರಿಶೀಲನೆ ಹೆಸರಲ್ಲಿ ಅವ್ಯಾಹತವಾಗಿ ವಸೂಲಿ ನಡೆಯುತ್ತಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ಬೆಂಗಳೂರು ಕಚೇರಿಯ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂಬುದು ಸದ್ಯದ ಮಾಹಿತಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net